Gl harusha
ರಾಜ್ಯ ವಾರ್ತೆ

ಕಾರ್ಕಳ: ಹೋಂ ನರ್ಸ್‌ನಿಂದ ಲಕ್ಷಾಂತರ ರೂ ವಂಚನೆ ಇಬ್ಬರು ಆರೋಪಿಗಳ ಅರೆಸ್ಟ್.!!

ಹೋಂ ನರ್ಸ್ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ದಹಿಸರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

 

srk ladders
Pashupathi
Muliya

ಕಾರ್ಕಳ: ಹೋಂ ನರ್ಸ್ ಆಗಿ ಮನೆ ಸೇರಿಕೊಂಡು ಮನೆ

ಯಜಮಾನರ ಗೂಗಲ್ ಪೇ ಪಿನ್ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ದಹಿಸರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ. ಮುಂಬಯಿ

ಬಂಧಿತ ಆರೋಪಿಗಳನ್ನು ಕುಕ್ಕುಂದೂರಿನ ಕುಪ್ಪಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (28) ಮತ್ತು ತೆಳ್ಳಾರು ನಿವಾಸಿ ರತ್ನಾಕರ್ (50) ಎಂದು ಗುರುತಿಸಲಾಗಿದೆ. ಆರೋಪಿಗಳು ಶಶಿಧರ್ (75) ಎಂಬುವವರಿಗೆ 9 ಲ. ರೂ ವಂಚನೆ ಮಾಡಿದ್ದಾರೆ.

ಶಶಿಧರ್ ಅವರ ಕೋರಿಕೆಯ ಮೇರೆಗೆ ಅಲೈಟ್‌ಕೇರ್ ಎಂಬ ಸಂಸ್ಥೆಯ ಆರೋಪಿ ರತ್ನಾಕರ್ ನಿಂದ ಆರೋಪಿ ಕಾರ್ತಿಕ್ ಶೆಟ್ಟಿ ಹೋಂ ನರ್ಸ್ ಆಗಿ ಮನೆಗೆ ಕೆಲಸಕ್ಕೆ ನಿಯೋಜನೆಗೊಂಡಿದ್ದ.

ಈ ವೇಳೆ ಶಶಿಧರ್ ಅವರು ಬೇರೆಯವರಿಗೆ ಹಣ ವರ್ಗಾವಣೆ ಮಾಡುವ ವೇಳೆ ಆರೋಪಿಯು ಗೂಗಲ್ ಪೇ ಪಿನ್ ನಂಬರ್ ಗಮನಿಸಿದ್ದ. ಬಳಿಕ ಹಂತಹಂತವಾಗಿ ಲಕ್ಷಾಂತರ ರೂ. ಹಣವನ್ನು ಭಾರತ್ ಬ್ಯಾಂಕ್ ಕೋ-ಅಪರೇಟಿವ್ ಸೊಸೈಟಿ ಖಾತೆಗೆ ಗೂಗಲ್ ಪೇ ಮುಖಾಂತರ ವರ್ಗಾವಣೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತನಿಖೆ ಕೈಗೆತ್ತಿಕೊಂಡ ಕಾರ್ಕಳ ನಗರ ಠಾಣೆ ಪೊಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದರು. ಆರೋಪಿಗಳು ಮುಂಬಯಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಅಲ್ಲಿಗೆ ತೆರಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…