pashupathi
ರಾಜ್ಯ ವಾರ್ತೆ

ರಾಜ್ಯದಲ್ಲೇ ಮೊದಲು! ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಯ ಅಸ್ಥಿ ದಾನ

tv clinic
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು ಉಳಿಸಲು ವೈದ್ಯರ ತಂಡ ಮುಂದಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ

akshaya college

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು(Bone Donation) ಉಳಿಸಲು ವೈದ್ಯರ ತಂಡ ಮುಂದಾಗಿದೆ.

ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲಿಗಲ್ಲು ಎಂದು ವೈದ್ಯರ ತಂಡ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕ ಜಂಬೂರು ಗ್ರಾಮದ ಸೋಮವಾರಪೇಟೆ ನಿವಾಸಿ ಈಶ್ವರ್ ಎನ್ (32) ಅವರ ಮೂಳೆ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ (KS Hegde)ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ(Dr.Vikram Shetty) ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ.

ಇದರಿಂದ ಕ್ಯಾನ್ಸರ್‌ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ವಿಕ್ರಮ್ ಶೆಟ್ಟಿ ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಈಶ್ವರ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರು. ಈಶ್ವರ್‌ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರ ಸಹೋದರಿ, ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಿದ ನಂತರ ಸಹೋದರನ ಅಸ್ಥಿಗಳನ್ನು ದಾನ ಮಾಡಲು ಮುಂದಾದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…