tamanvi
ರಾಜ್ಯ ವಾರ್ತೆ

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ "ರಾಣಿ” ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪಿಲಿಕುಳ(Pilikula) ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ” ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ.

ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮನೀಡಿತ್ತು.

ಪ್ರಸ್ತುತ ಪಿಲಿಕುಳ ಮೃಗಾಲಯ ದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ ಬಳಿಕ ಗುರುತಿಸಲಾಗುವುದು ಎಂದು ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಎಚ್.ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಾಲ್ಮೀಕಿ ನಿಗಮ ಹಗರಣ: ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆ.21ರಂದು ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ

ಪುತ್ತೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ…