Gl harusha
ರಾಜ್ಯ ವಾರ್ತೆ

ಮೂಡ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಟ್ವಿಸ್ಟ್! 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿ ವಶ!!

ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ರಾತ್ರೋರಾತ್ರಿ ಮುಟ್ಟುಗೋಲು ಹಾಕಿಕೊಂಡಿದೆ.

srk ladders
Pashupathi
Muliya

ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್ ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು. ಮೈಸೂರಿನ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಹಿನ್ನೆಲೆಯಲ್ಲಿ ಸುಮಾರು 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

ಈ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಇ.ಡಿ, ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಸುಮಾರು 300 ಕೋಟಿ ರೂ. ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ…