Gl jewellers
ರಾಜ್ಯ ವಾರ್ತೆ

ಮೈಕ್ರೋ ಫೈನಾನ್ಸ್’ಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ!!ಆರ್.ಬಿ.ಐ. ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿನಿದೆ?

Karpady sri subhramanya
ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದೆ. ಇದರ ಬೆನ್ನಲ್ಲೇ ಆರ್ಬಿಐ ಕೂಡ ಮೈಕ್ರೋ ಫೈನಾನ್ಸ್ ಗಳಿಗೆ ಖಡಕ್ ಸೂಚನೆಯನ್ನು ನೀಡಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ಸಿದ್ದರಾಮಯ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದೆ. ಇದರ ಬೆನ್ನಲ್ಲೇ ಆರ್ಬಿಐ ಕೂಡ ಮೈಕ್ರೋ ಫೈನಾನ್ಸ್ ಗಳಿಗೆ ಖಡಕ್ ಸೂಚನೆಯನ್ನು ನೀಡಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಆರ್‌ಬಿಐ ಮಾರ್ಗಸೂಚಿಗಳು

Sampya jathre

* ಸಾರ್ವಜನಿಕರಿಗೆ ತೊಂದರೆಯಾಗದಂತೆ ಗಮನಹರಿಸಬೇಕು. ಮೈಕ್ರೋ ಫೈನಾನ್ಸ್ ಕಂಪನಿಗಳು ಕಾನೂನು ನಿಯಮಾನುಸಾರ ನಡೆದುಕೊಳ್ಳಬೇಕು. ದೌರ್ಜನ್ಯ ನಡೆಯುವುದು ಕಂಡುಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ.

* ಹೆಚ್ಚುವರಿ ಸಾಲ ನೀಡುವುದು. ಸಂಜೆ 5 ಗಂಟೆಯ ನಂತರ ಸಾಲ ವಸೂಲಾತಿ ಮಾಡಲು ಹೋಗಬಾರದು. ಸಾಲ ವಸೂಲಾತಿ ಮಾಡುವಾಗ ಹೆದರಿಸಬಾರದು. ಹೆದರಿಸುವುದು ಕಂಡುಬಂದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಅವಕಾಶವಿದೆ.

• ದಬ್ಬಾಳಿಕೆ ಮಾಡಿ ಸಾಲ ವಸೂಲು ಮಾಡಬಾರದು. ಸಾಲ ಪಡೆಯುವವರಿಗೆ ಲೋನ್ ಶೀಟ್ ನೀಡಬೇಕು. ಅದು ಕಾನೂನು ಚೌಕಟ್ಟಿನಲ್ಲಿರಬೇಕು. ಆರ್‌ಬಿಐ ಮಾರ್ಗಸೂಚಿಯನ್ನು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಿಸಿ ಅಳವಡಿಸಬೇಕು. ಸಾಲದ ಬಡ್ಡಿ ಬಗ್ಗೆ ಮಾಹಿತಿ ನೀಡಬೇಕು.

ಸಾಲ ಪಡೆದು ಫೈನಾನ್ಸ್ ಕಂಪನಿಗಳ ವಿರುದ್ದ ತಿರುಗಿ ಬೀಳುವುದು ಕಂಡುಬಂದರೂ ಸಹ ಸಹಾಯವಾಣಿಗೆ ಕರೆ ಮಾಡಬಹುದು. ನೋಂದಣಿಯಾಗದ ಮೈಕ್ರೋ ಫೈನಾನ್ಸ್‌ ಕಂಪನಿಗಳ ವಿರುದ್ಧ ಕಾರ್ಯಾಚರಣೆಯನ್ನು ನಡೆಸಬಹುದು.

* ಸಾರ್ವಜನಿಕರು ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧಿತ ದೂರುಗಳ ಕುರಿತು ಪೊಲೀಸ್‌ ಕಂಟ್ರೋಲ್ ರೂಂಗೆ ಮಾಹಿತಿ ನೀಡಬಹುದು. ಒಬ್ಬರಿಗೆ ಒಂಬತ್ತು ಕಂಪನಿಗಳು ಸಾಲ ನೀಡಿರುವುದು ಕಂಡುಬಂದಿದೆ. ಆದ್ದರಿಂದ ಸಾಲ ನೀಡುವಾಗ ಪರಿಶೀಲಿಸಬೇಕು. ದೌರ್ಜನ್ಯ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಬಹುದು.

* ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಗಳ ಕುರಿತು ಮುಖ್ಯಮಂತ್ರಿಗಳು ಜಿಲ್ಲಾಮಟ್ಟದಲ್ಲಿ ನಿಗಾವಹಿಸಲು ನಿರ್ದೇಶನ ನೀಡಿದ್ದಾರೆ. ಕಾನೂನು ಬಾಹಿರವಾಗಿ ಸಾಲ ವಸೂಲಾತಿ ಮಾಡುವಂತಿಲ್ಲ. ಯಾವುದೇ ಕಾರಣಕ್ಕೂ ಸಾಲಗಾರರ ಮೇಲೆ ಬಾಕಿ ವಸೂಲಾತಿಗಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಒತ್ತಡ ಹೇರತಕ್ಕದ್ದಲ್ಲ.

* ಸಾಲ ಬಾಕಿ ವಸೂಲಾತಿ ನೆಪದಡಿ ಸಾಲಗಾರರ ಮನೆ/ಕೌಂಪೌಂಡ್/ ಗೋಡೆ ಇತ್ಯಾದಿಗಳ ಮೇಲೆ ಗೋಡೆಬರಹ ಬರೆಯುವುದು/ ಅಂಟಿಸುವುದು ಮುಂತಾದ ಕಾರ್ಯ ನಡೆಸತಕ್ಕದ್ದಲ್ಲ. ಸಾಲ ವಸೂಲಾತಿ ವಿಚಾರವಾಗಿ ದೌರ್ಜನ್ಯ/ ಅಸಭ್ಯ ವರ್ತನೆ ತೋರುವುದು ಅಥವಾ ಬಲತ್ಕಾರವಾಗಿ ಚರಾಸ್ಥಿ/ ಸ್ಥಿರಾಸ್ಥಿ ಜಪ್ತಿ ಮಾಡುವಂತಿಲ್ಲ.

* ನೋಂದಣಿಯಾಗಿರದ ಯಾವುದೇ ಮೈಕ್ರೋ ಫೈನಾನ್ಸ್ ಕಂಪನಿಗಳು ಕಾರ್ಯಾಚರಿಸುವಂತಿಲ್ಲ. ರಿಸರ್ವ್ ಬ್ಯಾಂಕ್‌ ಆಫ್ ಇಂಡಿಯಾ ನಿಗದಿಪಡಿಸಿದ ಗರಿಷ್ಟ ಬಡ್ಡಿದರಕ್ಕಿಂತ ಹೆಚ್ಚಿನ ಬಡ್ಡಿದರ ವಿಧಿಸತಕ್ಕದ್ದಲ್ಲ/ ವಸೂಲಿ ಮಾಡುವಂತಿಲ್ಲ.

* ಮೈಕ್ರೋ ಫೈನಾನ್ಸ್ ಕಂಪನಿಗಳು ಮೇಲೆ ತಿಳಿಸಿದಂತೆ ಅಥವಾ ಇನ್ಯಾವುದೇ ರೀತಿಯಿಂದ ಸಾಲಗಾರರಿಗೆ ಕಿರುಕುಳ ನೀಡಿದಲ್ಲಿ, ಸಾಲಗಾರರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದಲ್ಲಿ ಅಥವಾ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೂ ಅವಕಾಶವಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ರಾಜ್ಯಮಟ್ಟದ ಆಯ್ಕೆ ಸಮಿತಿ ಸದಸ್ಯರಾಗಿ ಶ್ರೀನಿವಾಸ್‌ ನಾಯಕ್ ಇಂದಾಜೆ ನೇಮಕ

ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್‌ ಪಾಸ್‌ ವಿತರಣೆ ಮಾಡಲು ಸರಕಾರ ರಚಿಸಿರುವ…

ಗೋಬಿಯಲ್ಲೂ ಪತ್ತೆಯಾಯ್ತು ಅಪಾಯಕಾರಿ ರಾಸಾಯನಿಕ! | ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರದಿಂದ ನಾಳೆಯೇ ಘೋಷಣೆ?

ಬೆಂಗಳೂರು: ಜನರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ…