Gl
ರಾಜ್ಯ ವಾರ್ತೆ

ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ನಿಷೇಧ: ಆದೇಶ

ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿ ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸರಕಾರಿ ಕಚೇರಿಗಳಲ್ಲಿ ಮತ್ತು ಸರಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಕರ್ನಾಟಕ ಸರಕಾರ ಸುತ್ತೋಲೆ ಹೊರಡಿಸಿ ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

Pashupathi

ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಹಾಗೂ ಸರಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್‌, ಪೇಪ‌ರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

akshaya college

ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್‌ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ ಹಾಗೂ ಸುತ್ತೋಲೆಗಳನ್ನು ಹೊರಡಿಸಲಾಗಿತ್ತು.

ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

108 ಆ್ಯಂಬುಲೆನ್ಸ್ ಸೇವೆ ಬಲಪಡಿಸಲು ಹೊಸ ಯೋಜನೆ!! ಆಶಾ ಮೆಂಟರ್ಸ್ ಜವಾಬ್ದಾರಿ ಆರೋಗ್ಯ ಕೇಂದ್ರದ ಸಿಬಂದಿ ಹೆಗಲಿಗೆ!

108 ಆರೋಗ್ಯ ಕವಚ ಸೇವೆಯನ್ನು ಜಿವಿಕೆ ಸಂಸ್ಥೆಯಿಂದ ಹಿಂಪಡೆದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ವೀಡಿಯೋ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ! ಸುಳ್ಳಿನ ಮೇಲೆ ಸುಳ್ಳು ಹೇಳಿದ್ಯಾಕೆ ಬಾಲಕೃಷ್ಣ!

ಚೈತ್ರಾ ಬಿಗ್ ಬಾಸ್ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ…