Gl jewellers
ರಾಜ್ಯ ವಾರ್ತೆ

ರಾಜ್ಯದ 9 ವಿಶ್ವವಿದ್ಯಾಲಯ ಮುಚ್ಚಲು ತೀರ್ಮಾನ !!

10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು:  10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

Pashupathi
Papemajalu garady
Karnapady garady

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಈ ಉಪಸಮಿತಿಯು, ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು  ಮೊದಲ ಸಭೆ ನಡೆಯಿತು.

ಸಭೆಯಲ್ಲಿ ಬೀದ‌ರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಯಲ್ಲಿದೆ.

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕು. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ಬಹುತೇಕ ವಿಶ್ವವಿದ್ಯಾಲಯಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ. 342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ ಮೂಲಸೌಕರ್ಯ ಸಲಕರಣೆ ವಾಹನ ಪೀಠೋಪಕರಣ ಇತರೆ ವಸ್ತುಗಳ ಖರೀದಿಸಲು ಅಗತ್ಯವಿದೆ ಎಂದು ವರದಿಯಲ್ಲಿ ಹೇಳಿತ್ತು.

ಸಭೆಯಲ್ಲಿ ಸಚಿವರಾದ ಡಾ.ಎಂ.ಸಿ.ಸುಧಾಕರ್, ಡಾ.ಶರಣ್ ಪ್ರಕಾಶ್ ಪಾಟೀಲ, ಡಾ.ಎಚ್.ಸಿ.ಮಹದೇವಪ್ಪ, ಎಚ್‌.ಕೆ.ಪಾಟೀಲ ಅವರು ಇದ್ದರು.

ಈ ಕೆಳಗಿನ ವಿವಿ ಮುಚ್ಚುಗಡೆ ಸ್ಥಿತಿಯಲ್ಲಿದೆ

ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…