Gl jewellers
ರಾಜ್ಯ ವಾರ್ತೆ

“ಮಹಿಳೆಯರೇ, ಮಹಿಳಾ ಸೀಟಲ್ಲಿ ಮಾತ್ರ ಕುಳಿತುಕೊಳ್ಳಿ”!! ಮಹಿಳಾ ಪ್ರಯಾಣಿಕರಿಂದ ರೋಸಿ ಹೋದ ಕೆಎಸ್‌ಆರ್‌ಟಿಸಿಯ ಸೂಚನೆ

ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

Papemajalu garady
Karnapady garady

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪುರುಷರಿಗೆಂದು ಪ್ರತ್ಯೇಕವಾಗಿ ಸೀಟು ಮೀಸಲಿಡಲಾಗಿದೆಯೇ ಎಂಬ ಪ್ರಶ್ನೆಯೂ ಇಲ್ಲಿ ತಲೆಎತ್ತಿದೆ. ಈ ಬಗ್ಗೆ ಪ್ರಶ್ನಿಸಿದಾಗ, ಮಹಿಳೆಯರಿಗೆ ಮೀಸಲಿರುವ ಸೀಟುಗಳನ್ನು ಹೊರತುಪಡಿಸಿ ಉಳಿದ ಸೀಟುಗಳು ಪುರುಷರಿಗೆ ಮೀಸಲಿಡಲಾಗಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…