ರಾಜ್ಯ ವಾರ್ತೆ

ಹಕ್ಕಿ ಜ್ವರ ಭೀತಿ-ಪಶುಸಂಗೋಪನೆ ಇಲಾಖೆಯಿಂದ ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ

GL
ರಾಜ್ಯದಲ್ಲಿ ಹಕ್ಕಿಜ್ವರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಕೋಳಿ ಮಾಂಸ ಸೇವನೆ ಬಗ್ಗೆ ಭೀತಿ ಮೂಡಿದೆ. ಹಲವೆಡೆ ಕೋಳಿ ಮಾಂಸಕ್ಕೆ ಬೇಡಿಕೆ ದಿಢೀ‌ರ್ ಕುಸಿದಿದೆ. ಜನ ಮೊಟ್ಟೆ ತಿನ್ನಲೂ ಹಿಂಜರಿಯುತ್ತಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಹಕ್ಕಿಜ್ವರದ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಕೋಳಿ ಮಾಂಸ ಸೇವನೆ ಬಗ್ಗೆ ಭೀತಿ ಮೂಡಿದೆ. ಹಲವೆಡೆ ಕೋಳಿ ಮಾಂಸಕ್ಕೆ ಬೇಡಿಕೆ ದಿಢೀ‌ರ್ ಕುಸಿದಿದೆ. ಜನ ಮೊಟ್ಟೆ ತಿನ್ನಲೂ ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಇಲಾಖೆ ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

chennai-shopping
maithri

ಕೋಳಿ ಮಾಂಸ ಸೇವನೆಗೆ ಮಾರ್ಗಸೂಚಿ

1. 70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಮಾಂಸ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು.

2. ಕೋಳಿ ಮಾಂಸವನ್ನು ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು.

3. ಅಡುಗೆಗಾಗಿ ಕೋಳಿ ಮಾಂಸವನ್ನು ತಯಾರು ಮಾಡಿದ ಬಳಿಕ ನಂಜು ನಾಶಕದಿಂದ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು.

4. ಹಸಿ ಕೋಳಿ ಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು ಬೇಯಿಸದೆ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರವಹಿಸಬೇಕು

5. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು.

6. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ.

ಕೋಳಿ ಫಾರಂಗಳಿಗೆ ಮುಂಜಾಗ್ರತಾ ಕ್ರಮ

1. ಸಾರ್ವಜನಿಕರು ಅನಗತ್ಯವಾಗಿ ಕೋಳಿಫಾರಂಗೆ ಭೇಟಿ ನೀಡಬಾರದು.

2. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು.

3. ಕೋಳಿ ಸಾಕಲು ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕ ಸಿಂಪಡಿಸಬೇಕು.

4. ಕೋಳಿ ಪಂಜರಗಳನ್ನು ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನು ಪ್ರತಿದಿನ ಬದಲಾಯಿಸುವುದು.

5. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದುಬೈ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್‌

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ಪರಿಣಾಮವಾಗಿ…