ರಾಜ್ಯ ವಾರ್ತೆ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ- ಶಿವಶ್ರಿ

ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಇಂದು  ಗುರುವಾರ ನಡೆಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್ ಅವರ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಇಂದು  ಗುರುವಾರ ನಡೆಯಿತು

akshaya college

ಮದುವೆಯ ಮೊದಲ ದಿನವಾದ ಬುಧವಾರ ಸಂಜೆ ವರಪೂಜೆ ಕಾರ್ಯಕ್ರಮ ನಡೆಯಿತು. ಮಾ.6ರ ಗುರುವಾರ ಬೆಳಗ್ಗೆ ಕಾಶಿಯಾತ್ರೆ, ಜೀರಿಗೆ ಬೆಲ್ಲ ಧಾರೆ, ನಿರೀಕ್ಷಣೆ ಮುಹೂರ್ತ, ಮಾಂಗಲ್ಯಧಾರಣೆ ಹಾಗೂ ಲಾಜಾ ಹೋಮ ನಡೆಯಿತು. ಬೆಳಗ್ಗೆ 9.30 ರಿಂದ 10.15ರ ನಡುವಿನ ತುಲಾ ಲಗ್ನದಲ್ಲಿ ವಧು ಶಿವಶ್ರೀ ಸ್ಕಂದಪ್ರಸಾದ್ ಅವರನ್ನ ತೇಜಸ್ವಿ ಸೂರ್ಯ ವರಿಸಿದ್ದಾರೆ

ಬಳಿಕ ತೇಜಸ್ವಿ ಸೂರ್ಯರ ಗಿರಿನಗರ ನಿವಾಸದಲ್ಲಿ ವಧುವನ್ನು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ ನ ಡೆಯಿತು. ಮಾ.9 ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಆರತಕ್ಷತೆ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts