ಪುತ್ತೂರು: ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪವನ್ನು ಸರಿಪಡಿಸುವಲ್ಲಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.
ಶುಕ್ರವಾರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷದಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ, ಇ ಖಾತೆಯಲ್ಲಿನ ಲೋಪ ದೋಷಗಳಿಂದಾಗಿ ಗ್ರಾಮೀಣ ಭಾಗದ ಜನತೆ ಸಂಕಷ್ಟಪಡುವಂತಾಗಿದೆ. ಕಳೆದ ಕೆಲವು ತಿಂಗಳಿಂದ ಈ ಸಮಸ್ಯೆ ಉಂಟಾಗಿದ್ದು ಇನ್ನೂ ಪರಿಹಾರವಾಗಿಲ್ಲ. ಅಧಿಕಾರಿಗಳು ಶೀಘ್ರದಲ್ಲೇ ಪರಿಹಾರವಾಗಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ ವಿನ ಇದುವರೆಗೂ ವ್ಯವಸ್ಥೆಯಲ್ಲಿ ಸುಧಾರಣೆಯಾಗಿಲ್ಲ.ಸಬ್‌ರಿಜಿಸ್ಟ್ರರ್ ಕಚೇರಿಗೆ ಜನ ಅಲೆದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಯಾವ ತಾಂತ್ರಿಕ ದೋಷದಿಂದ ಈ ಸಮಸ್ಯೆ ಉಂಟಾಗಿದೆಯೋ ಅದನ್ನು ತಕ್ಷಣ ಸರಿಪಡಿಸಬೇಕು ಮತ್ತು ಇ ಖಾತೆಯಲ್ಲಿನ ಲೋಪದೋಷವನ್ನು ಸರಿಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಶಾಸಕರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ತಕ್ಷಣವೇ ಅಧಿಕಾರಿಗಳಲ್ಲಿ ಈ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ.
ಕೋಟ್
ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪದೋಷದ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತಂದಿದ್ದೇನೆ, ತಕ್ಷಣ ಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ನನ್ನ ಕ್ಷೇತ್ರ ವ್ಯಾಪ್ತಿಯ ಜನರಿಗೆ ಯಾವುದೇ ತೊಂದರೆಯಾಗಬಾರದು, ತೊಂದರೆಯಾದರೆ ನಾನು ಆ ಬಗ್ಗೆ ಸುಮ್ಮನೆ ಇರುವುದಿಲ್ಲ. ಕಂದಾಯ ಇಲಾಖೆಯಲ್ಲಿನ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ವ್ಯವಸ್ಥೆಯಲ್ಲಿನ ಲೋಪಗಳು ಪರಿಹಾರವಾಗುವ ಸಂಪೂರ್ಣ ಭರವಸೆ ಇದೆ.