Gl jewellers
ಸ್ಥಳೀಯ

ಪುತ್ತೂರು ಬಂಟರ ಸಂಘದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ |ಲೋಕಾರ್ಪಣೆಗೊಂಡ ನೂತನ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ

ಪುತ್ತೂರು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳವಾರ ಕೊಂಬೆಟ್ಟು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

Papemajalu garady
Karnapady garady

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು – ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕಿನ ಮಾರ್ಗದರ್ಶನದಲ್ಲಿ, ಯುವ ಬಂಟರ ವಿಭಾಗ, ವಿದ್ಯಾರ್ಥಿ ಬಂಟರ ವಿಭಾಗ, ಬಂಟರ ಸಂಘ ಪುತ್ತೂರು ತಾಲೂಕಿನ ಸಹಕಾರದಲ್ಲಿ ಕಾರ್ಯಕ್ರಮ ನಡೆಯಿತು.

ಉದ್ಘಾಟನೆ ನೆರವೇರಿಸಿದ ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಸ್ನಾತಕೋತ್ತರ ತುಳು ಉಪನ್ಯಾಸಕಿ ಮಣಿ ಎಂ. ರೈ ಮಾತನಾಡಿ, ತುಳುನಾಡಿನ ಬಂಟ ಮಹಿಳೆಯರು ಸ್ವಾತಂತ್ರ್ಯ ಹೋರಾಡದಲ್ಲಿ ಭಾಗಿಯಾದ ಉದಾಹರಣೆ ಅನೇಕ ಇದೆ. ಇಂದು ಕೃಷಿ ಸಹಿತ ಅನೇಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು, ಸಮಾಜದ ಮನ್ನಣೆಗೆ ಪಾತ್ರರಾಗಿದ್ದಾರೆ ಎಂದರು.

ಆಶಯ ಭಾಷಣ ಮಾಡಿದ ಮಮತಾ ಪಿ. ಶೆಟ್ಟಿ, ಮಹಿಳೆಯರ ಬಗ್ಗೆ ಪೂಜ್ಯ ಭಾವನೆ ಇದೆ. ಇದನ್ನು ಉಳಿಸಿಕೊಂಡು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು. ಹೀಗೆ ಮುಂದುವರಿಯುವಾಗ ಅನೇಕ ಸವಾಲುಗಳು ಎದುರಾಗುತ್ತವೆ. ಎದೆಗುಂದದೆ ಅದನ್ನು ಎದುರಿಸಿ, ಯಶಸ್ಸು ಕಂಡುಕೊಳ್ಳಿ ಎಂದರು.

ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಮಾತನಾಡಿ, ಪುತ್ತೂರಿನ ಬಂಟರ ಸಂಘದಲ್ಲಿ ಮಹಿಳಾ ವಿಭಾಗ ಆರಂಭವಾದಾಗಿನಿಂದ ಉತ್ತಮ ಕಾರ್ಯ ನಡೆಯುತ್ತಿವೆ. ಇನ್ನಷ್ಟು ಸಮಾಜಮುಖಿ ಕಾರ್ಯ ಮಹಿಳೆಯರಿಂದ ಮೂಡಿ ಬರಲಿ ಎಂದು ಹಾರೈಸಿದರು.

ಪುತ್ತೂರು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ದುರ್ಗಾ ಪ್ರಸಾದ್ ರೈ ಕುಂಬ್ರ, ಮಾಜಿ ಶಾಸಕರಾದ ಶಕುಂತಳಾ ಟಿ. ಶೆಟ್ಟಿ, ಮಲ್ಲಿಕಾ ಪ್ರಸಾದ್ ಭಂಡಾರಿ, ಮಹಿಳಾ ಬಂಟರ ವಿಭಾಗದ ವಿಶೇಷ ಆಹ್ವಾನಿತರಾದ ಸುಮಾ ಅಶೋಕ್ ರೈ, ಮಾಲಿನಿ ಮುತ್ತು ಶೆಟ್ಟಿ, ಮಾಜಿ ಅಧ್ಯಕ್ಷೆಯರಾದ ಸಬಿತಾ ಭಂಡಾರಿ, ಕುಮುದಾ ಎಲ್.ಎನ್. ಶೆಟ್ಟಿ, ಮೀರಾ ಭಾಸ್ಕರ್ ರೈ, ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ವಿದ್ಯಾರ್ಥಿ ಬಂಟರ ವಿಭಾಗದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳದ್ದಡ್ಡ ಶುಭಹಾರೈಸಿದರು.

ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ ನರಿಮೊಗರು ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರೊಫೆಸರ್ ಹಾಗೂ ಪ್ಯಾಥೋಲಜಿ ವಿಭಾಗ ಮುಖ್ಯಸ್ಥೆ ಡಾ. ಸತ್ಯವತಿ ಆಳ್ವ, ನಿವೃತ್ತ ಮುಖ್ಯಗುರು ಕೆ. ವಾರಿಜ ರಘುನಾಥ ರೈ ನುಳಿಯಾಲು, ನಾಟಿವೈದ್ಯೆ ವಾರಿಜ ಎಂ. ಶೆಟ್ಟಿ ಬರೆಮೇಲು ಕೋಡಿಂಬಾಡಿ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವೈದ್ಯೆ, ಮಿಸೆಸ್ ಇಂಡಿಯಾ ಕರ್ನಾಟಕ 2024ರ ಪ್ರಥಮ ರನ್ನರ್ ಅಪ್ ಡಾ. ರಶ್ಮಾ ಎಂ. ಶೆಟ್ಟಿ, ಕ್ರೀಡಾಪಟು ದೀಕ್ಷಾ ರೈ ಪಟ್ಟೆ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಬಾಲಪ್ರತಿಭೆ ಶಾನ್ವಿ ವಿ. ಶೆಟ್ಟಿ ಕೈಕಾರ ಅವರನ್ನು ಗೌರವಿಸಲಾಯಿತು.

ಭವ್ಯ ಎ. ರೈ, ಮೈತ್ರಿ ರೈ, ಶಕುಂತಳಾ ಪ್ರಾರ್ಥಿಸಿದರು. ಕಾರ್ಯದರ್ಶಿ ಕುಸುಮಾ ಪಿ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕೋಶಾಧಿಕಾರಿ ಅರುಣಾ ಡಿ. ರೈ ವಂದಿಸಿ, ಹರಿಣಾಕ್ಷಿ ಜೆ. ಶೆಟ್ಟಿ ಹಾಗೂ ಮಾಧವಿ ಮನೋಹರ್ ರೈ ಕಾರ್ಯಕ್ರಮ ನಿರೂಪಿಸಿದರು.

ಸಭೆಗೆ ಮೊದಲು ಐಸಿರಿ ಮಹಿಳಾ ಭಜನಾ ತಂಡ ಉದ್ಘಾಟನೆಗೊಂಡು, ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಸೌಪರ್ಣಿಕಾ ಗುರುರಾಜ್ ರೈ ಈಶ್ವರಮಂಗಲ ಅವರಿಂದ ಗಣಪತಿ ತಾಳಂ ನಡೆಯಿತು. ಮಧ್ಯಾಹ್ನದ ಬಳಿಕ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ನುಳಿಯಾಲು ನಿರ್ದೇಶನದಲ್ಲಿ ಮಹುಷಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ