Gl
ಸ್ಥಳೀಯ

ಆರ್ಯಾಪು: ಹೊತ್ತಿ ಉರಿದ ದನದ ಕೊಟ್ಟಿಗೆ ! ರಸ್ತೆಯಿಲ್ಲದೇ ಪರದಾಡಿದ ಅಗ್ನಿಶಾಮಕ ದಳ ಸಿಬ್ಬಂದಿ!!

ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು, ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

rachana_rai
Pashupathi
akshaya college
Balakrishna-gowda

ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ.

pashupathi

ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯರೋಧನವಾಯಿತು.

ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ ಇರುವ ಆರ್ಯಾಪು ಬೈಲಿನ ಕೆಲ ಮನೆಗಳಿಗೆ ಇಂದೂ ಕೂಡ ರಸ್ತೆ ಇಲ್ಲ. ಕಳೆದ ಹಲ ವರ್ಷಗಳಿಂದ ರಸ್ತೆಗಾಗಿ ನಡೆಸುತ್ತಿರುವ ಹೋರಾಟಕ್ಕೆ ಯಾರೂ ಬೆಲೆ ನೀಡಿಲ್ಲ. ಮನೆ ಹಿರಿಯರು ಅನಾರೋಗ್ಯಕ್ಕೆ ತುತ್ತಾದಾಗಲೂ ಎತ್ತಿಕೊಂಡು ಹೋಗಿ ಆಸ್ಪತ್ರೆ ಸೇರಿಸಿದ ಉದಾಹರಣೆ ಇಲ್ಲಿದೆ. ಇದೀಗ ದನದ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಶಮನ ಮಾಡಲು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.

ಕೆಲವೇ ಕ್ಷಣದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಜರಾದರು. ಆದರೇನು ಮಾಡುವುದು. ದೇವಳದವರೆಗೆ ಬಂದ ಸಿಬ್ಬಂದಿ, ರಸ್ತೆ ಇಲ್ಲದ ಪರಿಸ್ಥಿತಿ ಕಂಡು ಹೌಹಾರಿದರು.

ಆದರೇನು ಮಾಡುವುದು ಬೆಂಕಿ ಆರಿಸಲು ರಸ್ತೆ ಬೇಕೇ ಬೇಕೆಂದು ಪಟ್ಟು ಹಿಡಿದು ಕೂರುವಂತಿಲ್ಲ. ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಿ, ಹೇಗೋ ಬೆಂಕಿ ಆರಿಸಲಾಯಿತು. ಸ್ಥಳೀಯರು ಕೈಗೂಡಿಸಿದರು.

ಇಂತಹ ಘಟನೆಗಳಿಂದ ಪರಿಸ್ಥಿತಿ ಇನ್ನಷ್ಟು ಅತಿರೇಕಕ್ಕೆ ಹೋಗುವ ಮೊದಲು ಅಧಿಕಾರಿಗಳು, ಜನಪ್ರತಿನಿಧಿಗಳು ಕಾರ್ಯೋನ್ಮುಖರಾದರೆ ಒಳಿತು. ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆ ನಿರ್ಮಾಣವಾದರೆ ಈ ಭಾಗದ ಅನೇಕ ಮನೆಗಳವರು ನಿಟ್ಟುಸಿರು ಬಿಟ್ಟಾರು.

ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಮನೆಯವರು ಅಂದಾಜಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100