ಧಾರ್ಮಿಕಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಅಭಿವೃದ್ಧಿಗೆ 10 ಲಕ್ಷ ರೂ. ದೇಣಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿದ 10 ಲಕ್ಷ ರೂ. ಡಿಡಿ ಯನ್ನು ದೇವಸ್ಥಾನಕ್ಕೆ ಶುಕ್ರವಾರ ಹಸ್ತಾಂತರಿಸಲಾಯಿತು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೇವಸ್ಥಾನದ ಆಡಳಿತ ಅಧಿಕಾರಿ ಹನುಮ ರೆಡ್ಡಿ ಅವರಿಗೆ ಹಸ್ತಾಂತರ ಮಾಡಿದರು.

SRK Ladders

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ತಾಲೂಕ ಅಧ್ಯಕ್ಷ ಲೋಕೇಶ್ ಹೆಗ್ಡೆ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ. ಜನಜಾಗೃತಿ ಮಾಜಿ ಅಧ್ಯಕ್ಷ ಮಹಾಬಲ ರೈ ಒಳ್ತಡ್ಕ, ಪುತ್ತೂರು ವಲಯ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ನಾರಾಯಣ ಭಟ್, ಮೇಲ್ವಿಚಾರಕಿ ಶೃತಿ, ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3