Gl harusha
ವಿದೇಶಸ್ಥಳೀಯ

ಪಿತ್ತಕೋಶದ ಬದಲು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ !!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕೆಲವೊಮ್ಮೆ ವೈದ್ಯರು ಮಾಡುವ ಸಣ್ಣದೊಂದು ಎಡವಟ್ಟು, ನಿರ್ಲಕ್ಷ್ಯ ರೋಗಿಯ ಜೀವನವನ್ನೇ ಬದಲಾಯಿಸಿ ಬಿಡುತ್ತದೆ. ವೈದ್ಯರ ಎಡವಟ್ಟಿನಿಂದ ವ್ಯಕ್ತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. ವೈದ್ಯರು ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ದಾಖಲಾದ ವ್ಯಕ್ತಿಯ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿದ್ದಾರೆ.

srk ladders
Pashupathi

41 ವರ್ಷದ ಜಾರ್ಜ್ ಬೇಸೆಟೊ ತೊಂದರೆಗೆ ಸಿಲುಕಿದವರು. ಅವರು ಪಿತ್ತಕೋಶದ ಶಸ್ತ್ರಚಿಕಿತ್ಸೆಗಾಗಿ ಅರ್ಜೆಂಟೀನಾದ ಕಾರ್ಡೋಬಾದಲ್ಲಿರುವ ಫ್ಲೋರೆನ್ಸಿಯೊ ಡಿಯಾಜ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಫೆಬ್ರವರಿ 28ರಂದು ಶಸ್ತ್ರ ಚಿಕಿತ್ಸೆಯ ದಿನ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದ ಫೆಬ್ರವರಿ 29ಕ್ಕೆ ಮುಂದೂಡಲಾಗಿತ್ತು. ʼʼಶಸ್ತ್ರಚಿಕಿತ್ಸೆಯ ದಿನದಂದು ಆಸ್ಪತ್ರೆಯ ಸಿಬ್ಬಂದಿ ಏನನ್ನೂ ಕೇಳದೆ ಅಥವಾ ಹೆಲ್ತ್ ಚಾರ್ಟ್ ಅನ್ನು ಕೂಡ ಪರಿಶೀಲಿಸದೆ ಆಪರೇಷನ್ ಮಾಡಲು ಕರೆದುಕೊಂಡು ಹೋಗಿದ್ದರುʼʼ ಎಂದು ಜಾರ್ಜ್ ಬೇಸೆಟೊ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಎಚ್ಚರಗೊಂಡ ಜಾರ್ಜ್ ಬೇಸೆಟೊ ಬಳಿ ಸಂತಾನಶಕ್ತಿ ಹರಣ ಚಿಕಿತ್ಸೆಯ ಬಗ್ಗೆ ವೈದ್ಯರು ತಿಳಿಸಿದ್ದರು. ಇದರಿಂದ ಜಾರ್ಜ್ ಬೇಸೆಟೊ ಶಾಕ್‌ಗೆ ಒಳಗಾಗಿದ್ದರು. ನಂತರ ಪಿತ್ತಕೋಶದಸದ್ಯ ವೈದ್ಯರ ಈ ಎಡವಟ್ಟಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಜಾರ್ಜ್ ಅವರ ವಕೀಲ ಡಿಯಾಗೋ ಲ್ಯಾರೆ ಮಾತನಾಡಿ, ”ವೈದ್ಯರ ಈ ಮಟ್ಟದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಜಾರ್ಜ್ ಇಬ್ಬರು ಗಂಡು ಮಕ್ಕಳ ತಂದೆಯಾಗಿದ್ದರೂ, ಕೂಡ ಅವರು ಹೊಸ ಸಂಬಂಧದಲ್ಲಿದ್ದಾರೆ ಮತ್ತು ಭವಿಷ್ಯದಲ್ಲಿ ಮತ್ತೊಂದು ಮಗು ಹೊಂದಲು ಯೋಜನೆಯನ್ನು ಹಾಕಿಕೊಂಡಿದ್ದರು” ಎಂದು ಹೇಳಿದ್ದಾರೆ. ಜಾರ್ಜ್ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ