ಸ್ಥಳೀಯ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣ|  ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಚರ್ಚೆ

ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದು ಇದಕ್ಕೆ ಸಂಬಂಧಿಸಿದಂತೆ ವಿವಿಧ ಹಂತದ ಕೆಲಸ ಕಾರ್ಯಗಳಯ ಪ್ರಗತಿಯಲ್ಲಿದ್ದು ಗುರುವಾರದಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಚಿವರಗಳನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಶುಕ್ರವಾರ ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಹಿತೇಶ್ ಸಿಂಗ್,ಕಾರ್ಯದರ್ಶಿ ಪಿ ಸಿ ಜಾಫರ್ (ಬಜೆಟ್)ಪ್ರಧಾನ ಕಾರ್ಯದರ್ಶಿ ಎಂ ಟಇ ವೇಜು ( ವೆಚ್ಚ) ಇವರ ಜೊತೆ ಶಾಸಕರು ಸುದೀರ್ಘ ಮಾತುಕತೆ ನಡೆಸಿದ್ದಾರೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಇಲಾಖೆಯ ಅಧಿಕಾರಿಗಳ ಮುತುವರ್ಜಿಯೂ ಅಗತ್ಯವಾಗಿದ್ದು ಇದಕ್ಕಾಗಿ ಆರ್ಥಿಕ ಇಲಾಖೆಯ ಪ್ರಮುಖ ಅಧಿಕಾರಿಗಳ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಪ್ರತ್ಯೇಕ ಪ್ರತ್ಯೇಕವಾಗಿ ಭೇಟಿಯಾಗಿ ಅವರೊಡನೆ ಚರ್ಚೆ ನಡೆಸಿದ್ದಾರೆ.

ಮೆಡಿಕಲ್ ಕಾಲೇಜು ಪ್ರಾರಂಭವಾಗುವ ಮುನ್ನ ೩೦೦ಬೆಡ್‌ನ ಆಸ್ಪತ್ರೆಯ ನಿರ್ಮಾಣವಾಗಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಕಾಲೇಜು ಪ್ರಕ್ರಿಯೆ ಆರಂಭಗೊಳ್ಳುತ್ತದೆ. ಇದಕ್ಕಾಗಿ ೩೦೦ ಕೋಟಿ ಅನುದಾನವನ್ನು ಸರಕಾರ ಶೀಘ್ರ ಬಿಡುಗಡೆಮಾಡಲಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115