ಸ್ಥಳೀಯ

ಹಿಮ್ಮುಖ ಚಲಿಸಿದ ಬಸ್: ಹೆಚ್ಚಿದ ಹಾನಿ ಪ್ರಮಾಣ!!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಚಾಲಕ ಅಜಾಗರೂಕತೆಯಿಂದ ಬಸ್ ಹಿಮ್ಮುಖವಾಗಿ ಚಲಾಯಿಸಿದ್ದರಿಂದ ಬಸ್ ವಾಹನಗಳ ಪಾರ್ಕಿಂಗ್ ಪ್ರದೇಶ ದಾಟಿ ಅಂಗಡಿಗೆ ನುಗ್ಗಿದ್ದರಿಂದ ನಾಗರಾಜ್ ಭಟ್ ಎಂಬವರ ಸಿಹಿತಿಂಡಿ ಮತ್ತು ತಂಪು ಪಾನೀಯ ಮಾರಾಟದ ಅಂಗಡಿಗೆ ಹಾನಿಯಾಗಿದೆ.

SRK Ladders

ಕಬ್ಬು ಅರೆಯುವ ಯಂತ್ರ ಸೇರಿದಂತೆ ಅಂಗಡಿಯ ಕಪಾಟುಗಳಿಗೂ ಹಾನಿಯಾಗಿದೆ. ಮಾತ್ರವಲ್ಲದೆ ಮೂರಾಲ್ಕು ದ್ವಿಚಕ್ರ ವಾಹನ ಹಾಗೂ ಕಾರಿಗೂ ಹಾನಿಯಾಗಿದೆ.

ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3