ಕರಾವಳಿಸ್ಥಳೀಯ

ಕಾಲೇಜು ಆವರಣದಲ್ಲೇ ಆ್ಯಸಿಡ್ ದಾಳಿ! | ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಮುಸುಕು ಧರಿಸಿದ್ದು, ಓರ್ವ ಆರೋಪಿಯನ್ನು ವಿದ್ಯಾರ್ಥಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 132