ಸ್ಥಳೀಯ

ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧ ಆಯ್ಕೆ | 3ನೇ ಬಾರಿಗೆ ಆಯ್ಕೆಯಾಗಿರುವ ಸಜ್ಜನ ನಾಯಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸ್ಥಾನಕ್ಕೆ ಅವರು ಇದೀಗ 3ನೇ ಬಾರಿಗೆ ಆಯ್ಕೆಯಾದಂತಾಗಿದೆ.

SRK Ladders

ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಸಹಕಾರಿ ಕ್ಷೇತ್ರದ ಹಿರಿಯ ಧುರೀಣರೂ, ಹಲವಾರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಹಂತ-ಹಂತವಾಗಿ ಬೆಳೆದು ಸ್ಕ್ಯಾಡ್ಸ್ ನ ನಿರ್ದೇಶಕರೂ, ಶ್ರೀ ಕ್ಷೇತ್ರ ಕೆಯ್ಯೂರು ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಶ್ರೀ ಹೊಸಮ್ಮ ದೈವಸ್ಥಾನ ಪಲ್ಲತ್ತಡ್ಕ ಆಡಳಿತ ಸಮಿತಿ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ.

ಈ ಹಿಂದೆ ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅತ್ಯುತ್ತಮ ನಿರ್ವಹಣೆಗಾಗಿ ಸರ್ವಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು.

ಹಲವು ಪ್ರಶಸ್ತಿಗಳಿಂದ ಪುರಸ್ಕೃತಗೊಂಡಿರುವ ಎಸ್.ಬಿ. ಜಯರಾಮ ರೈ ಅವರು ಇದೀಗ ಮತ್ತೊಮ್ಮೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 2