tamanvi
ರಾಜ್ಯ ವಾರ್ತೆಸ್ಥಳೀಯ

ಕಡಬ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮಹಿಳಾ ಆಯೋಗದಿಂದ ತ್ವರಿತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

maithri

ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ ಹೆಬ್ಬಾಳ್ಕರ್, ಇದೊಂದು ಹೀನಕೃತ್ಯವಾಗಿದ್ದು, ಈಗಾಗಲೇ ದಾಳಿ ನಡೆಸಿದವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವ ಉದ್ದೇಶದಿಂದ ಮಾಡಲಾಗಿದೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಪೊಲೀಸರು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ. ಈ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಕೂಡ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮಹಿಳೆಯರ ಸುರಕ್ಷತೆ ಮತ್ತು ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ರಾಜ್ಯ ಮಹಿಳಾ ಆಯೋಗ ತ್ವರಿತ ಕ್ರಮಕ್ಕೆ ಮುಂದಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಆ್ಯಸಿಡ್ ಎರಚಿದ್ದು, ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಗಾಯಗಳಾಗಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಮೋಹನ್ ಭಾಗವತ್’ಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ!

ತಾನು ಗೃಹ ಸಚಿವನಾಗಿ ಇರುವವರೆಗೂ ಕರ್ನಾಟಕದಲ್ಲಿ ಆರ್.ಎಸ್.ಎಸ್. ಪಥಸಂಚಲನಕ್ಕೆ ಅನುಮತಿ ಕಡ್ಡಾಯ…

1 of 159