pashupathi
ಸ್ಥಳೀಯ

ಶ್ರೀಕೃಷ್ಣ ವಿದ್ಯಾಸಂಸ್ಥೆಯ ನೇತೃತ್ವ ವಹಿಸಿಕೊಂಡ ದ್ವಾರಕಾ ಪ್ರತಿಷ್ಠಾನ | 75ರ ಸಂಭ್ರಮಕ್ಕೆ ವರ್ಷವಿಡೀ ಕಾರ್ಯಕ್ರಮ, ಮುಂದಿನ ಶೈಕ್ಷಣಿಕ ವರ್ಷದಿಂದ ಆಂಗ್ಲ ಮಾಧ್ಯಮವೂ ಆರಂಭ

tv clinic
75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: 75 ಪೂರೈಸಿದ ಸಂಭ್ರಮದಲ್ಲಿರುವ ವರ್ಷಗಳ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯನ್ನು ಮುನ್ನಡೆಸುವ ನೇತೃತ್ವವನ್ನು ಪುತ್ತೂರು ದ್ವಾರಕಾ ಪ್ರತಿಷ್ಠಾನ ವಹಿಸಿಕೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮವನ್ನೂ ಆರಂಭ ಮಾಡಲಿದ್ದೆವೆ ಎಂದು ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆ ಪಟ್ಟೆ ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹೇಳಿದ್ದಾರೆ.
ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಟ್ಟೆ ನರಸಿಂಹ ಭಟ್ ಮತ್ತು ಬಾಲಕೃಷ್ಣ ಭಟ್ ಎಂಬವರ ನೇತೃತ್ವದಲ್ಲಿ ಮುನ್ನಡೆದುಕೊಂಡು ಬಂದಿರುವ ಶ್ರೀಕೃಷ್ಣ ವಿದ್ಯಾಸಂಸ್ಥೆಯು, ಸ್ಥಳೀಯ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುವ ಮೂಲಕ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದೀಗ ದ್ವಾರಕಾ ಪ್ರತಿಷ್ಠಾನವು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳನ್ನು ನಡೆಸಲು ಮುಂದಾಗಿದ್ದು, ಸುಸಂಸ್ಕೃತ ಸಮಾಜ ಕಟ್ಟುವ ನಿಟ್ಟಿನಲ್ಲಿ ಶಿಕ್ಷಣ ನೀಡುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಕೇವಲ ಸರ್ಟಿಫಿಕೇಟ್ ಪಡೆಯುವುದು ಶಿಕ್ಷಣವಲ್ಲ. ಶಿಕ್ಷಣದ ಮೂಲಕ ಮಕ್ಕಳು ಸಮಾಜಕ್ಕೆ ಆಸ್ತಿಯಾಗಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಕೊಡಬೇಕೆನ್ನುವ ಕನಸಿನೊಂದಿಗೆ ಈಗಿನ ಹೊಸ ಆಡಳಿತದೊಂದಿಗೆ ಉತ್ತಮ ಮೌಲ್ಯಾಧಾರಿತ ಶಿಕ್ಷಣ ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹಲವು ಯೋಜನೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕವಾಗಿ ಕೆ.ಜಿ. ಶಿಕ್ಷಣದಿಂದಲೇ ಆಂಗ್ಲ ಮಾಧ್ಯಮವನ್ನು ಆರಂಭಿಸಲಿದ್ದೇವೆ. ಹಾಲಿ ವಿದ್ಯಾಸಂಸ್ಥೆಯಲ್ಲಿ 274 ವಿದ್ಯಾರ್ಥಿಗಳಿದ್ದು, ಇದೀಗ ಈ ಶೈಕ್ಷಣಿಕ ವರ್ಷದಲ್ಲಿ 50 ರಿಂದ 100 ವಿದ್ಯಾರ್ಥಿಗಳು ಹೆಚ್ಚು ಸೇರ್ಪಡೆಗೊಂಡಿದ್ದಾರೆ. 75 ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯಲ್ಲಿ ವರ್ಷವಿಡೀ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಿದ್ದೇವೆ ಎಂದರು.
ಸದ್ಯಕ್ಕೆ ನಿಂತಿರುವ ಪಿಯು ಶಿಕ್ಷಣವನ್ನು ಮುಂದಿನ ಎರಡು ವರ್ಷಗಳಲ್ಲಿ ಪುನರಾರಂಭಿಸಲಿದ್ದೇವೆ. ಮುಂದಿನ ಮಳೆಗಾಲದ ಸಂದರ್ಭದಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಗೋಪಾಲಕೃಷ್ಣ ಭಟ್ ಹೇಳಿದರು.
ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಚಾಲಕ ವಿಘ್ನೇಶ್ ಮಾತನಾಡಿ, ಸುಸಂಸ್ಕೃತ, ಸಮಾಜದ ಜವಾಬ್ದಾರಿಯ ವಿದ್ಯಾರ್ಥಿಗಳನ್ನು ಅಲ್ಲಿ ಬೆಳೆಸಬೇಕೆಂಬ ಮುಖ್ಯ ಉದ್ದೇಶದಿಂದ ದ್ವಾರಕಾ ಪ್ರತಿಷ್ಠಾನವು ಈ ಸಂಸ್ಥೆಯ ನೇತೃತ್ವವನ್ನು ವಹಿಸಿಕೊಂಡಿದೆ. ಮಕ್ಕಳಿಗೆ ಸ್ಪರ್ಧಾತ್ಮಕ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ, ಮೌಲ್ಯವರ್ಧನ ಶಿಕ್ಷಣ ಮತ್ತು ಸಾಂಪ್ರಾದಾಯಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕಬೇಕೆನ್ನುವುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಳಿಗೆ ಗುರುಕುಲ ಮಾದರಿಯ ಶಿಕ್ಷಣ, ಕೃಷಿಗೆ ಸಂಬಂಧಿಸಿದ ಚಟುವಟಿಕೆ ಸಹಿತ ವಿದ್ಯಾರ್ಥಿಗಳ ಜೀವನ ಶೈಲಿಯ ಬದಲಾವಣೆಯ ಶಿಕ್ಷಣ ನೀಡಲಿದ್ದೇವೆ ಎಂದರು.
ದ್ವಾರಕಾ ಪ್ರತಿಷ್ಠಾನ ಮತ್ತು ಶ್ರೀಕೃಷ್ಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಅಮೃತಕೃಷ್ಣ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲಾಗುವುದು ಎಂದರು.
ದ್ವಾರಕಾ ಕಾರ್ಪೋರೇಶನ್ ಪ್ರೈ.ಲಿ. ಇದರ ಕಾರ್ಪೋರೇಶನ್ ವಿಭಾಗದ ಮುಖ್ಯಸ್ಥ ದುರ್ಗಾ ಗಣೇಶ್ ಉಪಸ್ಥಿತರಿದ್ದರು.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116