pashupathi
ಸ್ಥಳೀಯ

ಮಹಿಳಾ ವೈದ್ಯೆಯ ಮೇಲೆ ಹಲ್ಲೆಗೆ ಯತ್ನ: ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹಿಳಾ ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವೈದ್ಯರು ಹಾಗೂ ಆಸ್ಪತ್ರೆ ನೌಕರರು ಶನಿವಾರ ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

akshaya college

ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆ ಹಾಗೂ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿತ್ತು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಠಾಣೆಗೆ ಕರೆಸಲಾಗಿತ್ತು. ಬಳಿಕ ಆರೋಪಿ ಜೊತೆಗೆ ಮಗುವಿತ್ತು ಎಂಬ ಕಾರಣ ನೀಡಿ, ಪೊಲೀಸರು ಆರೋಪಿಯನ್ನು ಬಿಟ್ಟುಬಿಟ್ಟಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವೈದ್ಯರು ಹಾಗೂ ಆಸ್ಪತ್ರೆ ನೌಕರರು ಮಹಿಳಾ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಡಾ. ಗಣೇಶ್ ಪ್ರಸಾದ್ ಮುದ್ರಾಜೆ ಮಾತನಾಡಿ, ಆರೋಪಿಯನ್ನು 6 ಗಂಟೆಯ ಒಳಗಡೆ ಬಂಧಿಸಬೇಕು. ಅಲ್ಲಿವರೆಗೂ ಹೋರಾಟ ಮುಂದುವರಿಯಲಿದೆ. ಮುಂದಿನ ಹೋರಾಟದ ಬಗ್ಗೆ ಬಳಿಕ ನಿರ್ಧರಿಸಲಾಗುವುದು. ವೈದ್ಯರು ಕೆಲಸ ನಿರ್ವಹಿಸಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದರು.

ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ:

ಪುತ್ತೂರು ಸರಕಾರಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಪುತ್ತೂರು ಸರಕಾರಿ ನೌಕರರ ಸಂಘ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆ ನೌಕರರು, ಆರೋಪಿಯ ಬಂಧನಕ್ಕೆ ಆಗ್ರಹಿಸಿದರು. ಕೈಗೆ ಕಪ್ಪು ಪಟ್ಟಿ ಧರಿಸಿ, ಪ್ರತಿಭಟನೆ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116