Gl harusha
ಸ್ಥಳೀಯ

ಬೆಳ್ಳಾರೆ ಎನ್ಐಎ ದಾಳಿ ಪ್ರಕರಣ: ಬಿಜು ಅಬ್ರಹಾಂ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಪಂಜ: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತನನ್ನು ಬಂಧಿಸಿದ್ದಾರೆ.

srk ladders
Pashupathi
Muliya

ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ ಪಡೆದಿದ್ದು ಬೆಂಗಳೂರಿಗೆ ಕರೆದೊಯ್ದಿರುವ ಮಾಹಿತಿಯಿದೆ.

ಆರೋಪಿ ಬಿಜು ಅಬ್ರಾಹಂ, ಎಣ್ಮೂರಿನಲ್ಲಿ ಚಿದಾನಂದ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ. ಬೆಂಗಳೂರಿನ ಸುಲ್ತಾನ್ ಪಾಳ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಸಂಬಂಧಿಸಿ ಕಳೆದ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜುವನ್ನು ಬಂಧಿಸಲಾಗಿದೆ. ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಆರೋಪಿಗಳಿಗೆ ಬಿಜು ಅಬ್ರಾಹಂ ಆಶ್ರಯ ನೀಡಿದ್ದ ಎಂಬ ಆರೋಪದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಿಜು ಮನೆಯಲ್ಲಿ ಏಕಾಏಕಿ ದಾಳಿ ನಡೆಸಿ ಶೋಧ ನಡೆಸಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ