ಪುತ್ತೂರು: ದರ್ಬೆ – ಮಂಜಲ್ಪಡ್ಪು ನಡುವಿನ ಬೈಪಾಸ್ ರಸ್ತೆಯ ಪರ್ಲಡ್ಕದಲ್ಲಿ ಗುಡ್ಡ ಕುಸಿತ ಉಂಟಾಗಿ, ಕೆಲ ಕಾಲ ಸಂಚಾರಕ್ಕೆ ಅಡಚಣೆಯಾದ ಘಟನೆ ಭಾನುವಾರ ನಡೆಯಿತು.
ಪರ್ಲಡ್ಕ ಜಂಕ್ಷನ್ ಬಳಿಯ ಕಾವೇರಿ ಹಾರ್ಡ್’ವೇರ್ ಪಕ್ಕದಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಇದರಿಂದ ಕೆಲ ಎರಡು ಕಡೆಯ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
ಎರಡು ಜೆಸಿಬಿ ಸಹಾಯದಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.
























