Gl
ದೇಶರಾಜ್ಯ ವಾರ್ತೆಸ್ಥಳೀಯ

ಸುಧಾಮೂರ್ತಿ ಇನ್ನು ರಾಜ್ಯಸಭೆ ಎಂ.ಪಿ. | ಶುಭಹಾರೈಸಿದ ಮೋದಿ ಹೇಳಿದ್ದೇನು?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಮಾಜಿ ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

rachana_rai
Pashupathi

ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಬರೆದಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

1 of 131