ಕರಾವಳಿಸ್ಥಳೀಯ

ಕಂಟೇನರ್ ಲಾರಿ – ಬಸ್‌ ಮುಖಾಮುಖಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಅನಾಹುತ!!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಮಾ.9ರ ಶನಿವಾರ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3