ಕರಾವಳಿಸ್ಥಳೀಯ

ಯುವತಿ ಜತೆ ಅನುಚಿತವಾಗಿ ವರ್ತಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ ಪೊಲೀಸ್ ವಶಕ್ಕೆ!

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ: ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ. 9 ರಂದು ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಿರ್ವಾಹಕನೇ ಆರೋಪಿ.

SRK Ladders

ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಏರಿದ್ದರು. ಆಲಂಕಾರಿಗೆ ಎಂದು ಯುವತಿ ಹೇಳಿದರೂ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಕಡಬದತ್ತ ಬಸ್ ಹೊರಟಿತ್ತು ಎನ್ನಲಾಗಿದೆ.

ಆಲಂಕಾರಿನಲ್ಲಿ‌ ಇಳಿಯುವ ವೇಳೆ ತನ್ನ ಮೈ ಮುಟ್ಟಿ ಇಲ್ಲಿ ಇಳಿಯಬೇಡಿ ಎಂದು ಒತ್ತಾಯ ಪೂರ್ವಕವಾಗಿ ಕಡಬದತ್ತ ಕರೆದುಕೊಂಡು ಬಂದಿರುವುದಾಗಿ ಯುವತಿ‌ ಕವಿತಾ ಎಂಬವರು ಬಸ್ಸಿನ ನಿರ್ವಾಹಕನ ವಿರುದ್ದ ದೂರು ನೀಡಿದ್ದಾರೆ. ಅಲ್ಲದೇ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಠಾಣೆಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.

ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಮುಂದಕ್ಕೆ ತೆರಳಲು ಪೊಲೀಸರು ಪರ್ಯಾಯವಾಗಿ ಬೇರೆ ಬಸ್ಸಿನ ವ್ಯವಸ್ಥೆ ಕಲ್ಪಿಸಿ ನಿರ್ವಾಹಕನ್ನು ಠಾಣೆಗೆ ಕರೆದೊಯ್ದಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಮುಚ್ಚಳಿಕೆ ಬರೆಸಿ ಮುಂದೆ ಪ್ರಯಾಣಿಕರ ಜೊತೆ ಸಭ್ಯತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿರುವುದಾಗಿ ತಿಳಿದು ಬಂದಿದೆ. ಅಲ್ಲದೆ ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಯ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೋಡಿರುವುದಾಗಿ ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3