ಸ್ಥಳೀಯ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕಿನಲ್ಲಿ ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸನ್ಮಾನಿಸಲಾಯಿತು.

akshaya college

ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ ಕೊಳತ್ತಾಯ ಅವರು ಬ್ಯಾಂಕಿನ ಸರ್ವಾಂಗಿಣ ಪ್ರಗತಿಯ ವಿವರ ನೀಡಿ ಸನ್ಮಾನದ ಮಾತುಗಳನ್ನಾಡಿದರು.

ಸಹಕಾರಿ ಸಂಘಗಳ  ಉಪ ನಿಬಂಧಕ ರಮೇಶ ಎಚ್.ಎನ್. ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಸಹಕಾರಿ ಬ್ಯಾಂಕುಗಳ ಪಾತ್ರದ ಬಗ್ಗೆ ವಿವರಿಸಿ, ಟೌನ್ ಬ್ಯಾಂಕಿನ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಪುತ್ತೂರು ಟೌನ್ ಬ್ಯಾಂಕ್ ಜನಮನದಲ್ಲಿ ಮನೆಮಾತಾದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಇತ್ತಿಚೆಗಿನ ಪ್ರಗತಿಯನ್ನು ಶ್ಲಾಘಿಸಿದರು.

ಪುತ್ತೂರಿನ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಎಸ್.ಎಮ್. ರಘು, ಮಂಗಳೂರಿನ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಪುತ್ತೂರು ಸಹಕಾರಿ ಸಂಘಗಳ CDO ಶೋಭಾ, ಬೆಳ್ತಂಗಡಿ CDO ಪ್ರತಿಮಾ, ಒಡಿಯೂರು ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಸುರೇಶ ರೈ, ಬ್ಯಾಂಕಿನ ನಿರ್ದೇಶಕರಾದ ಕಿರಣ್ ಕುಮಾರ ರೈ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಸುಜೀಂದ್ರ ಪ್ರಭು, ಶ್ರೀಧರ ಪಟ್ಲ, CA ಅರವಿಂದ ಕೃಷ್ಣ, ಮಲ್ಲೇಶ ಕುಮಾರ್, ಗಣೇಶ ಕೌಕ್ರಾಡಿ, ಸೀಮಾ ನಾಗರಾಜ್, ವೀಣಾ, ಪುತ್ತೂರು ಶಾಖಾಧಿಕಾರಿ ಚಿದಂಬರ ಉಪಸ್ಥಿತರಿದ್ದರು.

ಬ್ಯಾಂಕಿನ ಹಿರಿಯ ನಿರ್ದೇಶಕ ಚಂದ್ರಶೇಖರ ರಾವ್ ಬಪ್ಪಳಿಗೆ ಸನ್ಮಾನಿತರ ವಿವರ ನೀಡಿದರು. ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಶೇಖರ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷ ಶ್ರೀಧರ ಗೌಡ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 107