ಪುತ್ತೂರು: ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್ ಅವರು ಜೂನ್ 26 ರಂದು ಪುತ್ತೂರು ವಕೀಲರ ಸಂಘಕ್ಕೆ ಬೇಟಿ ನೀಡಿದ್ದು, ಅವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಿ, ಅಭಿನಂದಿಸಲಾಯಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶರು, ಪುತ್ತೂರಿಗೆ ಆಗಮಿಸಿರುವುದು ಅತ್ಯಂತ ಖುಷಿಯನ್ನು ಕೊಟ್ಟಿದೆ. ವಕೀಲರ ಸಹಕಾರದಿಂದ ಇನ್ನಷ್ಟು ನೂತನವಾಗಿ ನಿರ್ಮಾಣಗೊಂಡ ಆನೆಮಜಲಿನ ನ್ಯಾಯಾಲಯ ಸಂಕೀರ್ಣದ ಕೆಲಸ ಕಾರ್ಯಗಳಿಗೆ ಸಹಕಾರ ಬೇಕು ಎಂದರು.
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ 5ನೇ ಹೆಚ್ಚುವರಿ ಸತ್ರ ನ್ಯಾಯಾಧೀಶೆ ಸರಿತಾ ಡಿ, ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣ್ ಪುರ, ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ವೈ.ಹೆಚ್, ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ಶಿವಣ್ಣ ಹೆಚ್. ಆರ್, ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ, ಸಂಘದ ಉಪಾಧ್ಯಕ್ಷ ಮೋನಪ್ಪ ಎಂ, ಕೋಶಾಧಿಕಾರಿ ಮಹೇಶ್ ಕೆ ಸವಣೂರು, ಸಂಘದ ಮಾಜಿ ಅಧ್ಯಕ್ಷ ಉದಯ ಶಂಕರ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಜೊತೆಕಾರ್ಯದರ್ಶಿ ಮಮತಾ ಸುವರ್ಣ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ ಸ್ವಾಗತಿಸಿ, ವಂದಿಸಿದರು.