ಕರಾವಳಿಸ್ಥಳೀಯ

ಅವಿವಾಹಿತ ಹೃದಯಾಘಾತದಿಂದ ಮೃತ್ಯು..!

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ.

ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ.

SRK Ladders

ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ ಉದಯ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಸೋಮವಾರ ಬೆಳಿಗ್ಗೆ ಉದಯ ಏಳಲಿಲ್ಲಾ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಯುವಕ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.

ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

1 of 3