ಸ್ಥಳೀಯ

ದ.ಕ., ಉಡುಪಿ: ನಾಳೆಯಿಂದ (ಮಾ.12) ರಮಝಾನ್ ಉಪವಾಸ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ನಡೆಯಲಿದೆ.

ಮಾ. 12ರಿಂದ ಅಂದರೆ ಮಂಗಳವಾರದಿಂದಲೇ ರಮಝಾನ್ ಉಪವಾಸ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್‌.ಎಂ. ರಶೀದ್‌ ಹಾಜಿ ತಿಳಿಸಿದ್ದಾರೆ.

SRK Ladders

ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಬಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3