ಪುತ್ತೂರು: ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಎಸ್.ಡಿ.ಪಿ.ಐ. ಸಹಿತ 30 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ಕಿಲ್ಲೆ ಮೈದಾನದ ಬಳಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು.
ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ, ಅಕ್ರಮವಾಗಿ ಗುಂಪು ಸೇರಿ ಧ್ವನಿವರ್ಧಕ ಬಳಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಎಸ್‌ಡಿಪಿಐ (SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಇತರರ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಕ್ರಮ:
ಕಾನೂನುಬಾಹಿರವಾಗಿ ಗುಂಪು ಸೇರಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿತರ ವಿರುದ್ಧ ಮೊಕದ್ದಮೆ ಸಂಖ್ಯೆ (ಅ.ಕ್ರ) 53/2025 ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಭಾರತೀಯ ನ್ಯಾಯ 3 (2.2.2) 0 189(2) (ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಅಕ್ರಮವಾಗಿ ಸೇರುವುದು) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 109ರ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.