ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಸಂತ್ರಸ್ತೆಗೆ ಸಂಬಂಧಿಸಿದಂತೆ ತಮ್ಮ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು.
ನಾವೇನು ಸುಮ್ಮನೆ ಕುಳಿತಿಲ್ಲ. ಪುತ್ತೂರು ಶಾಸಕರು ಮುತುವರ್ಜಿ ವಹಿಸಿ ಮಾತುಕತೆ ನಡೆಸಿದ್ದಾರೆ. ಪ್ರಕರಣವನ್ನು ರಾಜಕೀಯ ಮಾಡದೇ, ವಿವಾ ಮಾಡಿಕೊಡುವ ವಿಚಾರ ತಿಳಿಸಿದ ಬಳಿಕ ನಾವು ಮಧ್ಯಪ್ರವೇಶಿಸುವ ಅಗತ್ಯ ಇರಲಿಲ್ಲ. ಇದೀಗ ಪ್ರಕರಣ ಸುಖಾಂತ್ಯ ಕಂಡಿಲ್ಲ ಎಂಬ ವಿಚಾರ ಮುನ್ನೆಲೆಗೆ ಬಂದಿದ್ದು, ಹೇಳಿಕೆ ನೀಡುತ್ತಿದ್ದೇವೆ ಎಂದರು.
ಜಗನ್ನಿವಾಸ್ ರಾವ್ ವಿರುದ್ಧ ಕ್ರಮ:
ವಿವಾಹ ಮಾಡಿಕೊಡುವುದಾಗಿ ಜಗನ್ನಿವಾಸ್ ರಾವ್ ಹೇಳಿದ್ದರು. ಪಕ್ಷದ ಮುಖಂಡರು ಮಾತುಕತೆ ನಡೆಸಿದಾಗ, ಮದುವೆ ಮಾಡುವುದಾಗಿ ತಿಳಿಸಿದ್ದರು. ಹಾಗಾಗಿ ಈಗ ಮದುವೆ ಮಾಡಿಕೊಡುವ ಜವಾಬ್ದಾರಿ ಅವರದ್ದು. ಹಾಗೆ ಮಾಡಲಿಲ್ಲ ಎಂದಾದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು.
ಸಂತ್ರಸ್ತೆಯ ಪರವಾಗಿ ನಾವಿದ್ದೇವೆ. ಪಕ್ಷದ ಮುಖಂಡರು ಮಾತುಕತೆ ನಡೆಸಿದ್ದಾರೆ. ಇದು ಅಂತಿಮ ಹಂತಕ್ಕೆ ಬರಲಿ. ಅದಕ್ಕೆ ಶಾಸಕರಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ನಗರ ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ್ ಉಜಿರೆಮಾರು, ಮಾಜಿ ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು.