ಮೈಸೂರು: ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ ಅವರು ಭಾವುಕನಾದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಲೈವ್ ನಲ್ಲಿ ಮಾತನಾಡುತ್ತಾ, ಮೋದಿ ಹೆಸರಿನಿಂದ ತಾನು ಗೆದ್ದು ಬಂದೆ. ಅಧಿಕಾರ ಸಿಕ್ಕಿದ 10 ವರ್ಷಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಮುಂದೆ 3 – 4 ದಿನಗಳಷ್ಟೇ ಕೆಲಸ ಮಾಡಲು ಅವಕಾಶ ಸಿಗಬಹುದು ಎಂದು ಹೇಳಿಕೊಂಡು ಭಾವುಕರಾಗಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆ ಆಗಲಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಟಿಕೇಟ್ ಕೈತಪ್ಪುವುದು ನಿಶ್ಚಿತವಾದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.