ಸ್ಥಳೀಯ

ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಅವರಿಗೆ ಪಿತೃವಿಯೋಗ | ರಾಮ ಮಂದಿರ ಹೋರಾಟದಲ್ಲಿ ಸಕ್ರೀಯರಾಗಿದ್ದ ಶಿವಾನಂದ್ ರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಂಬಿಕಾ ವಿದ್ಯಾ ಸಂಸ್ಥೆಗಳ ಮಾತೃಸಂಸ್ಥೆಯಾಗಿರುವ ನಟ್ಟೋಜ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ್ ರಾವ್ (93) ಮಂಗಳವಾರ ಬೆಳಿಗ್ಗೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರೀಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಹೌದು.

ವಿಶ್ವ ಹಿಂದೂ ಪರಿಷತ್ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಹೋರಾಟದಲ್ಲೂ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ರಾಂ ಭಟ್ ಅವರ ಆತ್ಮೀಯರಾಗಿದ್ದು, ರಾಜಕೀಯವಾಗಿಯೂ ಸಾಕಷ್ಟು ಕೆಲಸ ನಿರ್ವಹಿಸಿದ್ದಾರೆ.

ಅವರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಯುವ ನ್ಯಾಯವಾದಿಗಳಿಗೆ ಐಎಎಸ್–ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ವಕೀಲರ ಸಂಘ ಪುತ್ತೂರು ಇವರ…

1 of 120