Gl harusha
ದೇಶಸ್ಥಳೀಯ

43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.
ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರರಾಗಿರುವ ನಕುಲ್ ನಾಥ್ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರ ಹೆಸರು ಸೇರಿದೆ.

srk ladders
Pashupathi
Muliya

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts