ಕಡಬ:ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರಲ್ಲಿ, ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಜು. 17ರಂದು ಬೆಳಗ್ಗೆ ಗುಡ್ಡ ಕುಸಿದ ಘಟನೆ ಸಂಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯು ಸಂಪೂರ್ಣವಾಗಿ ಬಂದ್ ಆಗಿದೆ.
ಹೆದ್ದಾರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದಿರುವ ಕಾರಣ, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಸ್ತುತ ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ.
ತಕ್ಷಣ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕಾರ್ಯ ಆರಂಭಿಸಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.
ಸಲಹೆ:
ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಚಾಲಕರು ಬದಲಿ ಮಾರ್ಗಗಳನ್ನು ಬಳಸುವಂತೆ ಕೋರಲಾಗಿದೆ