ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ ಎನ್ನಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಸಹೋದ್ಯೋಗಿ ತಕ್ಷಣ ಮನೆಯವರಿಗೆ ವಿಚಾರ ತಿಳಿಸಿ ಆಟೋ ರಿಕ್ಷಾದ ಮೂಲಕ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆಯನ್ನು ಮಾಡಿದರು. ಅಷ್ಟರಲ್ಲಿ ಮಹಿಳೆಯು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ.
ಬೆಳ್ಳಾರೆಯ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಮಹಿಳೆಯನ್ನು ಇದೀಗ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.