ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ‘ಪುತ್ತೂರ್ದ ಕೆಸರ್ದ ಗೊಬ್ಬು 2025’ ಕಾರ್ಯಕ್ರಮ ಆಗಸ್ಟ್ 3ರಂದು ಕಾರ್ಜಾಲು ಗದ್ದೆಯಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಜುಲೈ 21ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ್ ಭಟ್, ಅರುಣ್ ಕುಮಾರ್ ಪುತ್ತಿಲ, ಶ್ರೀಕೃಷ್ಣ ಉಪಾಧ್ಯಾಯ ಹಾಗೂ ಹಲವಾರು ಗಣ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




































