ರಾಜ್ಯ ವಾರ್ತೆಸ್ಥಳೀಯ

ಆರ್ಸಿಬಿ ಹೆಸರು ಬದಲಾವಣೆ? | ಆರ್.ಸಿ.ಬಿ. ಅನ್ ಬಾಕ್ಸ್ ಪ್ರೋಮೊದಲ್ಲಿ ಕಾಣಸಿಕೊಂಡ ರಿಷಬ್ ಶೆಟ್ಟಿಯಿಂದ ಸುಳಿವು!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಐಪಿಎಲ್ 17ನೇ ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್ 22ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್ಸಿಬಿ ಮುಖಾಮುಖಿಯಾಗಿದೆ. ಈ ಪಂದ್ಯ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಆರ್ಸಿಬಿ ಅಭಮಾನಿಗಳಿಗಾಗಿ ಮಾರ್ಚ್ 19ರಂದು ‘ಆರ್ಸಿಬಿ ಅನ್ಬಾಕ್ಸ್’ ಎಂಬ ಕಾರ್ಯಕ್ರಮ ನಡೆಸಲಿದೆ. ಈ ಸಮಾರಂಭದ ಪ್ರೋಮೊವೊಂದು ಬಿಡುಗಡೆಯಾಗಿದ್ದು, ಕಂಬಳದ ಕೋಣಗಳೊಂದಿಗೆ ನಟ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದೇ ವೇಳೆ ಅವರು ಹೇಳಿದ ಡೈಲಾಗ್ ಒಂದು ಆರ್ಸಿಬಿಯ ಹೆಸರು ಬದಲಾವಣೆಯಾಗುವ ಸುಳಿವೊಂದನ್ನು ನೀಡಿದಂತಿದೆ.

ಆರ್ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್ಸಿಬಿ ಅನ್ಬಾಕ್ಸ್ ಹೆಸರಿನಲ್ಲಿ ನಡೆಯುತ್ತ ಬಂದಿರುವ ಕಾರ್ಯಕ್ರಮ ಈ ಬಾರಿ ಮಾರ್ಚ್ 19ರಂದು ನಿಗದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

SRK Ladders

ಆರ್ಸಿಬಿ ಅನ್ಬಾಕ್ಸ್ನಲ್ಲಿ ತಂಡದ ಹೊಸ ಜೆರ್ಸಿಯನ್ನೂ ಅನಾವರಣಗೊಳಿಸಲಾಗುವುದು. ಜತೆಗೆ ಅಭಿಮಾನಿಗಳ ಎದುರು ಹಲವು ಅಚ್ಚರಿಯ ಮತ್ತು ವಿಶೇಷ ಘೋಷಣೆಗಳನ್ನು ಮಾಡಲಾಗುವುದು ಎಂದು ಆರ್ಸಿಬಿ ತಂಡ ಈಗಾಗಲೇ ತಿಳಿಸಿದೆ. ಈ ಬಾರಿಯ ಅಚ್ಚರಿ ಏನೆಂಬುದನ್ನು ಆರ್ಸಿಬಿ ಅಭಿಮಾನಿಗಳು ಕಾದು ಕುಳಿತಿದ್ದರು. ಇದರ ಬೆನ್ನಲೇ ಆರ್ಸಿಬಿ ಬಿಡುಗಡೆ ಮಾಡಿದ ಪೋಮೊವೊಂದು ಇದೀಗ ಅಭಿಮಾನಿಗಳಲ್ಲಿ ಇನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ.

ಕಾಂತಾರ ಸಿನೆಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅವರು ಈ ಪ್ರೋಮೊದಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಕಂಬಳದ ಕೋಣಗಳ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಬರೆದಿರುತ್ತದೆ. ಈ ವೇಳೆ ರಿಷಬ್ ಶೆಟ್ಟಿ ಬೆಂಗಳೂರು ಹೆಸರಿನ ಕೋಣವನ್ನು ಇದು ಬೇಡ ಭಟ್ರೆ.. ತೆಗೆದುಕೊಂಡು ಹೋಗಿ ಇದನ್ನು ಎಂದು ಹೇಳಿ ಅರ್ಥ ಆಯ್ತಾ ಎಂದು ಹೇಳುತ್ತಾರೆ. ಅವರ ಈ ಹೇಳಿಕೆ ನೋಡುವಾಗ ರಾಯಲ್ ಚಾಲೆಂಜರ್ಸ್ ಮುಂದೆ ಬೆಂಗಳೂರು ಎನ್ನುವ ಹೆಸರು ಬದಲಾಗುವ ಸಾಧ್ಯತೆಯೊಂದು ಕಂಡುಬಂದಿದೆ. ಏನೇ ಬದಲಾವಣೆ ಇದ್ದರೂ ಕೂಡ ಮಾರ್ಚ್ 19ರ ತನಕ ಕಾಯಲೇ ಬೇಕು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4