ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿಕೆ ಇವರ ಜಮೀನೊಂದರಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಶನಿವಾರ ರಾತ್ರಿ ಚಿರತೆಯೊಂದು ಬಿದ್ದಿದೆ.
ಕಳೆದ ಹಲವು ಸಮಯದಿಂದ ಹಾವಳಿ ನೀಡುತ್ತಿದ್ದ ಚಿರತೆ ಸೆರೆಗೆ ಗ್ರಾಮಸ್ಥರು ಮಾಡಿದ್ದ ಮನವಿ ಮೇರೆಗೆ ಅರಣ್ಯ ಇಲಾಖೆಯವರು ಜಮೀನಿನಲ್ಲಿ ಬೋನು ಇಟ್ಟಿದ್ದರು. ಈ ಬೋನಿಗೆ ಚಿರತೆ ಬಿದ್ದಿದೆ.ಚಿರತೆಯೊಂದು ಗ್ರಾಮದಲ್ಲಿ ಆಗಾಗ ಓಡಾಡುತ್ತಾ ಗ್ರಾಮದ ನಾಯಿ, ಕೋಳಿ, ಬೆಕ್ಕು, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಾಗಾಗಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು.
ಚಿರತೆ ಬೋನಿಗೆ ಬಿದ್ದಿರುವ ವಿಷಯ ತಿಳಿದು ಸಾರ್ವಜನಿಕರು ಜಮಾಯಿಸಿ ಚಿರತೆಯನ್ನು ವೀಕ್ಷಣೆ ಮಾಡಿದರು.ಇಲಾಖೆಯ ಮೇಲಾಧಿಕಾರಿಗಳ ಸೂಚನೆಯಿಂದ ದೂರದ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಭರತ್ ಅವರು ತಿಳಿಸಿದ್ದಾರೆ.