ಸ್ಥಳೀಯ

ಸ್ಥಳಾಂತರ ಭಾಗ್ಯ ಕಳೆದುಕೊಂಡ ಪುತ್ತೂರು ಮಹಿಳಾ ಪೊಲೀಸ್ ಠಾಣೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ಪುತ್ತೂರು: ಪುತ್ತೂರಿನಲ್ಲಿರುವ ಮಹಿಳಾ ಪೊಲೀಸ್‌ ಠಾಣೆಯನ್ನು ಪ್ರಸ್ತುತ ಸ್ಥಳದಿಂದ ಸ್ಥಳಾಂತರಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವ‌ರ್ ಅವರು ಸ್ಪಷ್ಟಪಡಿಸಿದ್ದಾರೆ

chennai-shopping
maithri

ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಪ್ರಸ್ತುತ ಠಾಣೆಯು ಕಾರ್ಯನಿರ್ವಹಿಸುತ್ತಿರುವ ಸ್ಥಳದ ಆಯಕಟ್ಟಿನ ಮಹತ್ವವನ್ನು ವಿವರಿಸಿ. ಸ್ಥಳಾಂತರದ ಅಗತ್ಯವಿಲ್ಲ ಎಂದು ಖಚಿತಪಡಿಸಿದ್ದಾರೆ.

ಸ್ಥಳಾಂತರಕ್ಕೆ ವಿರೋಧ

ಗೃಹ ಸಚಿವರು ನೀಡಿರುವ ಮಾಹಿತಿಯ ಪ್ರಕಾರ, ಪುತ್ತೂರು ಮಹಿಳಾ ಪೊಲೀಸ್ ಠಾಣೆಯು ನಗರದ ಹೃದಯ ಭಾಗದಲ್ಲಿದ್ದು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿದೆ. ಈ ಸ್ಥಳವು ಮಹಿಳೆಯರು ಮತ್ತು ಮಕ್ಕಳಿಗೆ ದೂರುಗಳನ್ನು ನೀಡಲು ಅತ್ಯಂತ ಸುಲಭ ಹಾಗೂ ಸುರಕ್ಷಿತವಾಗಿದೆ. ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಹಾಗೂ ನಗರದಲ್ಲಿ ಕಳ್ಳತನ ಮತ್ತು ಇತರ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಠಾಣೆಯು ಪ್ರಸ್ತುತ ಇರುವ ಸ್ಥಳದಲ್ಲಿಯೇ ಮುಂದುವರಿಯುವುದು ಆಯಕಟ್ಟಿನ ದೃಷ್ಟಿಯಿಂದ ಸೂಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.

ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಉಂಟಾಗುವ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಸೂಕ್ತ ಬಂದೋಬಸ್ತ್ ಏರ್ಪಡಿಸಲು ಠಾಣೆಯು ದೇವಸ್ಥಾನದ ಬಳಿ ಇರುವುದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೆಚ್ಚು ಅನುಕೂಲಕರವಾಗಿದೆ. ಸಾರ್ವಜನಿಕರು ಮತ್ತು ದೂರುದಾರರು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಠಾಣೆಯನ್ನು ಸಂಪರ್ಕಿಸಲು ಪ್ರಸ್ತುತ ಸ್ಥಳವು ಸಹಕಾರಿಯಾಗಿದೆ ಎಂದು ಸಚಿವರು ತಮ್ಮ ಉತ್ತರದಲ್ಲಿ ವಿವರಿಸಿದ್ದಾರೆ

ಜಮೀನಿನ ಕೊರತೆ ಪ್ರಮುಖ ಕಾರಣ

ಹೊಸ ಪೊಲೀಸ್ ಠಾಣಾ ಕಟ್ಟಡ ನಿರ್ಮಾಣಕ್ಕಾಗಿ ಕನಿಷ್ಠ 2 ಎಕರೆ ಜಮೀನಿನ ಅವಶ್ಯಕತೆ ಇದೆ. ಆದರೆ, ಮಹಿಳಾ ಠಾಣೆಯ ಸ್ಥಳಾಂತರಕ್ಕಾಗಿ ಕಾಯ್ದಿರಿಸಲಾಗಿದೆ ಎನ್ನಲಾದ ಜಮೀನು ಕೇವಲ 0.08 ಎಕರೆ ಮಾತ್ರ ಇದೆ.ಈ ಅಲ್ಪ ಸ್ಥಳಾವಕಾಶದಲ್ಲಿ ಸುಸಜ್ಜಿತ ಠಾಣೆ ನಿರ್ಮಾಣ ಹಾಗೂ ಪೊಲೀಸ್‌ ಸಿಬ್ಬಂದಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅಸಾಧ್ಯ. ಈ ಎಲ್ಲಾ ಕಾರಣಗಳನ್ನು ಪರಿಗಣಿಸಿ, ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯನ್ನು ಸ್ಥಳಾಂತರಿಸುವ ಅಗತ್ಯವಿಲ್ಲ ಎಂದು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 122