ಸ್ಥಳೀಯ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು.
ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ತಮ್ಮ ಜೀವನವನ್ನು ತ್ಯಾಗ, ಬಲಿದಾನ ಮಾಡಿದ ಭಗತ್ ಸಿಂಗ್, ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಹಿಂಸಾ ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಚುಕ್ಕಾಣಿ ಹಿಡಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್ ಮೊದಲಾದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ನಿಸ್ವಾರ್ಥ ಸೇವೆ, ಅವರ ದೇಶ ಪ್ರೇಮ ನಮಗೆಲ್ಲರಿಗೂ ಆದರ್ಶ. ನನ್ನ ದೇಶ ನನ್ನ ಹೆಮ್ಮೆ ಎಂಬ ರಾಷ್ಟ್ರ ಪ್ರೇಮ, ರಾಷ್ಟ್ರ ಭಕ್ತಿಯಿಂದ, ನಮ್ಮ ರಾಷ್ಟ್ರಕ್ಕೆ ಸುರಕ್ಷತೆ ನೀಡುವ ನಮ್ಮ ಯೋಧರನ್ನು, ದೇಶಕ್ಕೆ ಅನ್ನ ನೀಡುವ ನಮ್ಮ ರೈತರನ್ನು ನಾವು ಸದಾ ಗೌರವಿಸಬೇಕು ಎಂದರು.
ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆ, ಭ್ರಷ್ಟಾಚಾರ, ಕೋಮು ಗಲಭೆಗಳು ಸಮಾಜದ ಶಾಂತಿಯುತ ಬದುಕಿಗೆ ಮಾರಕವಾಗಿದೆ . ಈ ನಿಟ್ಟಿನಲ್ಲಿ ಯುವ ಸಮೂಹ ಜಾಗೃತರಾಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಜಗತ್ತಿನ ಎಲ್ಲಾ ರಾಷ್ಟ್ರಗಳ ವಿಶ್ವಾಸವನ್ನು ಗಳಿಸುತ್ತಾ ಜಗತ್ತಿನ ಅತ್ಯಂತ ಶ್ರೇಷ್ಠ ನಾಯಕ ಎಂಬುವುದು ನಮ್ಮೆಲ್ಲರ ಹೆಗ್ಗಳಿಕೆ. ‘ಆಪರೇಷನ್ ಸಿಂಧೂರ್’ ನಲ್ಲಿ ಭಾರತದ ಮಿಲಿಟರಿ ಶಕ್ತಿ, ನಮ್ಮ ಯೋಧರ ತಾಕತ್ತು , ಭಾರತದ ಸಾಮರ್ಥ್ಯ ಜಗತ್ತಿಗೆ ಅರಿವಾಗಿದೆ. ನಾವೆಲ್ಲರೂ ಪಣ ತೊಟ್ಟು ದುಡಿಯ ಬೇಕಾಗಿದೆ ಎಂದು ಕರೆ ನೀಡಿದರು.
ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ನಮ್ಮ ಯೋಧರ ತಮ್ಮ ಜೀವವನ್ನು ಪಣಕ್ಕಿಟ್ಟು ನಮಗೆ ಸುರಕ್ಷತೆ ನೀಡುತ್ತಿರುವಾಗ ,ದೇಶದ ಒಳಗೆ ಭಯೋತ್ಪಾದನೆ ಮತ್ತು ಸಾಮಾಜಿಕ ಅಶಾಂತಿಯ ಸೃಷ್ಟಿಸುವುದು ವಿಪರ್ಯಾಸ. ಈ ಹಿನ್ನೆಲೆಯಲ್ಲಿ ಯುವ ಸಮೂಹ ಎಚ್ಚೆತ್ತು ದೇಶ ರಕ್ಷಣೆ ಮತ್ತು ಭಾರತದ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ನಾವು ನಮ್ಮ ಕರ್ತವ್ಯವನ್ನು ಯಥಾವತ್ತಾಗಿ ಮಾಡಿದರೆ ; ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹಿರಿಯರನ್ನು ಗೌರವಿಸಿ , ಅವರ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ , ಉತ್ತಮ ಕಲಿಕೆ ಮತ್ತು ಸುಸಂಸ್ಕೃತ ಜೀವನ ನಡೆಸಿದರೆ ನಮ್ಮ ಜೀವನ ಸಾರ್ಥಕ ಎಂದು ತಿಳಿಸಿದರು.
ಪ್ರಾಂಶುಪಾಲ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಉಪಸ್ಥಿತರಿದ್ದರು.
ಫ್ಯಾಷನ್ ಡಿಸೈನ್ ವಿಭಾಗದ ವಿದ್ಯಾರ್ಥಿನಿಯರಾದ ಪ್ರಕೃತಿ, ರಮ್ಯಾ, ಮೋಕ್ಷ ರಾಷ್ಟ್ರಗೀತೆ ಮತ್ತು ಧ್ವಜ ಗೀತೆ ಹಾಡಿದರು. ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ನಾಯಕ ರಾಕೇಶ್ ಸ್ವಾಗತಿಸಿ, ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿ ವರ್ಷಿಣಿ ವಂದಿಸಿದರು. ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125