ಸ್ಥಳೀಯ

ಪುತ್ತೂರು: ಪಿಲಿಗೊಬ್ಬು-ಸೀಸನ್ 3 ಹಾಗೂ ಫುಡ್ ಫೆಸ್ಟ್‌ನ ಆಮಂತ್ರಣ ಪತ್ರ ಬಿಡುಗಡೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುಳುನಾಡಿನ ಜಾನಪದ ಕಲೆ ಹುಲಿವೇಷವನ್ನು ಉಳಿಸಿ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ ವಿಜಯ ಸಾಮ್ರಾಟ್ ಪುತ್ತೂರು ಸಂಸ್ಥೆಯು ಆಯೋಜಿಸಿರುವ, ಬಹುನಿರೀಕ್ಷಿತ ‘ಪುತ್ತೂರುದ ಪಿಲಿಗೊಬ್ಬು – ಸೀಸನ್ 3’ ಹಾಗೂ ‘ಫುಡ್ ಫೆಸ್ಟ್’ ಕಾರ್ಯಕ್ರಮಕ್ಕೆ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಗುರುವಾರ (ಆ. 17) ಅಧಿಕೃತ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡುವ ಮೂಲಕ, ಸೆಪ್ಟೆಂಬರ್ 28ರಂದು ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಸಾಂಸ್ಕೃತಿಕ ಹಬ್ಬಕ್ಕೆ ಮುನ್ನುಡಿ ಬರೆಯಲಾಯಿತು.

ವಿಜಯ ಸಾಮ್ರಾಟ್ ಸಂಸ್ಥೆಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ. ದೇವಳದ ಸತ್ಯ ಧರ್ಮ ನಡೆಯಲ್ಲಿ ತುಪ್ಪದ ದೀಪ ಬೆಳಗಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್‌ ಪಂಜಿಗುಡ್ಡೆ, ಸಹಜ್ ರೈ ಬಳಜ್ಜ ಹಾಗೂ ಇತರ ಗಣ್ಯರು ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿದರು.

ಸಂಪೂರ್ಣ ಸಹಕಾರದ ಭರವಸೆ:

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಮಾತನಾಡಿ, “ಪಿಲಿಗೊಬ್ಬು’ ಕಾರ್ಯಕ್ರಮದ ಯಶಸ್ಸಿಗಾಗಿ ದೇವರಲ್ಲಿ ಪ್ರಾರ್ಥಿಸಿ, ತುಪ್ಪದ ದೀಪ ಬೆಳಗಿಸಲಾಗಿದೆ. ನಮ್ಮ ಸಂಸ್ಕೃತಿಯನ್ನು ಉಳಿಸುವ ಈ ಮಹತ್ಕಾರ್ಯಕ್ಕೆ ದೇವಸ್ಥಾನದ ವತಿಯಿಂದ ಹಾಗೂ ವೈಯಕ್ತಿಕವಾಗಿ ನಮ್ಮ ಸಂಪೂರ್ಣ ಸಹಕಾರ ಮತ್ತು ಬೆಂಬಲವಿದೆ.” ಎಂದು ಭರವಸೆ ನೀಡಿದರು.

ಸಂಸ್ಕೃತಿ ಉಳಿಸುವ ಹಬ್ಬ:

ವಿಜಯ ಸಾಮ್ರಾಟ್ ಸಂಸ್ಥೆಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ಮಾತನಾಡಿ, “ತುಳುನಾಡಿನ ಸಾಂಸ್ಕೃತಿಕ ರಾಯಭಾರಿಯಂತಿರುವ ಹುಲಿವೇಷ ಕಲೆಯನ್ನು ಉಳಿಸಿ, ಮುಂದಿನ ಪೀಳಿಗೆಗೆ ತಲುಪಿಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಎರಡು ಸೀಸನ್ಗಳು ಅತ್ಯಂತ ಯಶಸ್ವಿಯಾಗಿದ್ದು, ಈ ಬಾರಿಯೂ ಎಲ್ಲರ ಸಹಕಾರದಿಂದ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸಲಾಗುವುದು. ಹುಲಿಗಳ ಕುಣಿತದ ಜೊತೆಗೆ, 50ಕ್ಕೂ ಹೆಚ್ಚು ಬಗೆಯ ಖಾದ್ಯಗಳಿರುವ ಫುಡ್ ಫೆಸ್ಟ್ ಕೂಡ ಪ್ರಮುಖ ಆಕರ್ಷಣೆಯಾಗಲಿದೆ.” ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ಪುತ್ತೂರುದ ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಉಮೇಶ್ ನಾಯಕ್, ಸಂಚಾಲಕ ನಾಗರಾಜ್ ನಡುವಡ್ಕ, ಕಾರ್ಯಾಧ್ಯಕ್ಷ ಸುಚಿತ್ ರೈ ಪಾಲ್ತಾಡ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷರಾದ ಶಂಕರ್ ಭಟ್ ಈಶಾನ್ಯ, ರತನ್ ರೈ ಕುಂಬ್ರ, ಕಾರ್ಯದರ್ಶಿಗಳಾದ ಶರತ್‌ ಕುಮಾರ್ ಮಾಡಾವು, ಅಶ್ವಿನ್ ರೈ, ಸುರೇಶ್ ಹಿದಪಟ್ಟ, ದಿನೇಶ್ ವಾಸುಕಿ, ಪವನ್ ಶೆಟ್ಟಿ ಕಂಬಳತ್ತಡ್ಡ. ಜೊತೆ ಕಾರ್ಯದರ್ಶಿಗಳಾದ ಧನುಷ್ ಹೊಸಮನೆ, ಆನಂದ ತೆಂಕಿಲ, ರಾಜೇಶ್ ರೈ ಪರ್ಪುಂಜ, ಸಂಘಟನಾ ಕಾರ್ಯದರ್ಶಿಗಳಾದ ಅರುಣ್ ರೈ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಕೋಶಾಧಿಕಾರಿಗಳಾದ ಅಶೋಕ್ ಅಡೂರು, ರಾಜೇಶ್ ಕೆ.ಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರದೀಪ್ ರೈ ಕರ್ನೂ‌್ರ, ನಿತೇಶ್‌ ನೆಲಪ್ಪಾಲ್‌, ನವೀನ್ ಗೌಡ, ಮೋಹನ್ ಕಬಕ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್‌ ಶೆಟ್ಟಿ. ಪ್ರದೀಪ್ ರೈ ಮಾಡಾವು. ಸಚಿನ್ ಶೆಟ್ಟಿ ಪಟ್ಟಿ, ಚರಣ್ ಕುಲಾಲ್, ಹರೀಶ್ ಕುಲಾಲ್ ಬೆದ್ರಾಳ, ಗೌತಮ್ ಗೌಡ, ಜಗದೀಶ್ ಜಿ.ಆ‌ರ್.ನಾಯಕ್, ಪ್ರಜ್ವಲ್ ಎಂ.ಎಸ್. ಭರತ್ ಚನಿಲ, ಮಹೇಶ್‌ ಆಚಾರ್ಯ, ಉಮೇಶ್ ಹಡಿಲ್, ಸುದರ್ಶನ್ ರೈ ನೀರ್ಪಾಡಿ, ಕಿಶನ್ ರೈ, ಅಭಿಲಾಷ್ ಕೊಲಕ್ಕೆಮಾರ್, ಚರಣ್ ರೈ ಮಠ, ನವೀನ್ ಪಡ್ಯೂರು, ಹರ್ಷರಾಜ್, ಅಭಿಷೇಕ್ ಯಾದವ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122