ರಾಜ್ಯ ವಾರ್ತೆಸ್ಥಳೀಯ

5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಕಥೆ ಏನು?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಬೋರ್ಡ್‌ ಎಕ್ಸಾಂ‌ ಅರ್ಧದಲ್ಲೇ ನಿಂತಿದೆ.

ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಮಕ್ಕಳಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾಗಿತ್ತು. ಅದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಹೈಕೋರ್ಟ್‌ ಮೆಟ್ಟಿಲೇರಿತ್ತು. ಹೈಕೋರ್ಟ್‌ ಪರೀಕ್ಷೆಗೆ ಅನುಮತಿ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಿದ್ದರಿಂದ ಮಾರ್ಚ್‌ 12ರಂದು ಸುಪ್ರೀಂಕೋರ್ಟ್‌ ಪರೀಕ್ಷೆಗೆ ತಡೆ ನೀಡಿದೆ. ವಿವಾದವನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಲು ಸೂಚಿಸಿದೆ. ಈ ನಡುವೆ ಮಾರ್ಚ್‌ 11ರಿಂದ ಆರಂಭಗೊಂಡ ಪರೀಕ್ಷೆಯನ್ನು ಮಧ್ಯದಲ್ಲೇ ನಿಲ್ಲಿಸಲಾಗಿದೆ. ಹೀಗಾಗಿ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ.

SRK Ladders

ರಾಜ್ಯ ಸರ್ಕಾರ ವಿವಾದವನ್ನು ಇತ್ಯರ್ಥಪಡಿಸಲು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಆದರೆ, ಅದು ಸಾಧಕ ಬಾಧಕಗಳ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಇತ್ತ ಬೋರ್ಡ್‌ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಕೋರಿ ರುಪ್ಸಾ ಬೆಂಬಲಿತ ಕೆಲವು ಪೋಷಕರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಇಂದು ಮಹತ್ವದ ವಿಚಾರಣೆ ನಿರೀಕ್ಷೆ
ಇದೇ ಸಂದರ್ಭದಲ್ಲಿ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸಬೇಕು ಮತ್ತು ಅವಕಾಶ ಕಲ್ಪಿಸಬಾರದು ಎಂದು ಕೋರಿ ಎರಡು ಪ್ರತ್ಯೇಕ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳ ವಿಚಾರಣೆಯನ್ನು ಇನ್ನಷ್ಟೇ ನಡೆಸಬೇಕಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು, ಸರ್ಕಾರ ನಡೆಸುವುದಕ್ಕೆ ಮುಂದಾಗಿರುವ ಪರೀಕ್ಷಾ ಕ್ರಮ ಗೊಂದಲಗಳಿಂದ ಕೂಡಿದೆ. ಇದರಿಂದ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಸರ್ಕಾರದ ಈ ಸುತ್ತೋಲೆ ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ 22ಕ್ಕೆ ಸೀಮಿತವಾಗಿಲ್ಲ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಅಲ್ಲದೆ, ಸರ್ಕಾರದ ಸುತ್ತೋಲೆಗಳನ್ನು ಸುಪ್ರೀಂ ಕೋರ್ಟ್ ಕಾನೂನುಬಾಹಿರ ಎಂದು ರದ್ದುಪಡಿಸಿದೆ. ಹೀಗಾಗಿ, ಸುತ್ತೋಲೆ ರದ್ದುಪಡಿಸಿರುವ ಕ್ರಮ ಸರಿಯಾಗಿದೆ ಎಂದು ವಿಭಾಗೀಯ ಪೀಠಕ್ಕೆ ವಿವರಿಸಿದರು.

ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ಅರ್ಜಿದಾರರು ವಿನಾಕಾರಣ ಪ್ರಕರಣ ಎಳೆದು ಹೋಗುತ್ತಿದ್ದಾರೆ. ಇದರಿಂದ ಮೇಲ್ಮನವಿ ಇತ್ಯರ್ಥಪಡಿಸಲು ವಿಳಂಬವಾಗಲಿದೆ. ಕರ್ನಾಟಕ ಶಿಕ್ಷಣ ಕಾಯಿದೆಯ ಸೆಕ್ಷನ್ ಪ್ರಕಾರ ರಾಜ್ಯ ಸರ್ಕಾರಕ್ಕೆ ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ಅವಕಾಶವಿದೆ. ಅದರಂತೆ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.

ಇದೀಗ ಶುಕ್ರವಾರದ ವಿಚಾರಣೆಯಲ್ಲಿ ಪರೀಕ್ಷೆಗೆ ಸಂಬಂಧಿಸಿ ಒಂದು ತೀರ್ಮಾನ ಬರಬಹುದು ಎಂಬ ನಿರೀಕ್ಷೆಯಲ್ಲಿ ಮಕ್ಕಳ ಪೋಷಕರು ಇದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ…

1 of 4