Gl harusha
ಸ್ಥಳೀಯ

ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಆವರಣ ಗೋಡೆ ಉದ್ಘಾಟಿಸಿದ ರೋಟರಿ ಜಿಲ್ಲಾ ಗವರ್ನರ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರು ಪಾಪೆಮಜಲು ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಆವರಣ ಗೋಡೆಯನ್ನು ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್. ಕೇಶವ್ ಉದ್ಘಾಟಿಸಿದರು.

srk ladders
Pashupathi
Muliya

ರೋಟರಿ ಕ್ಲಬ್’ನ ಜಿಲ್ಲಾ ಗವರ್ನರ್ ಅಧಿಕೃತ ಭೇಟಿಯ ಅಂಗವಾಗಿ ಶುಕ್ರವಾರ ಪಾಪೆಮಜಲು ಪ್ರೌಢಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಭಂಡಾರಿ, ಕಾರ್ಯದರ್ಶಿ ಸುಜಿತ್ ಡಿ. ರೈ, ನಿಯೋಜಿತ ಅಧ್ಯಕ್ಷ ಡಾ. ಶ್ರೀಪತಿ ರಾವ್, ಸುದರ್ಶನ್ ರಾವ್, ಮಧು ಎಸ್. ನರಿಯೂರು, ಜಗದೀಶ್ ಆಚಾರ್ಯ, ರಾಜ್ ಗೋಪಾಲ್, ಸೂರಜ್ ನಾಯರ್, ಸಂಕಪ್ಪ ರೈ, ಪ್ರೌಢಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಶಿಕ್ಷಣ ತಜ್ಞ ದಶರಥ ರೈ, ದಾನಿ ಚಂದ್ರಶೇಖರ್ ಬಲ್ಯಾಯ, ಮುಖ್ಯಶಿಕ್ಷಕ ಮೋನಪ್ಪ ಬಿ. ಪೂಜಾರಿ, ಶಿಕ್ಷಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts