ದೇಶಸ್ಥಳೀಯ

ಏ. 26, ಮೇ 7 ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ: ಇಲ್ಲಿದೆ ಆಯೋಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ದಕ್ಷಿಣ ಕನ್ನಡದಲ್ಲಿ ಮೊದಲ ಹಂತದ ದಿನವೇ ಅಂದರೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

SRK Ladders

ಕೇಂದ್ರ ಚುನಾವಣಾ ಆಯೋಗ ನವದೆಹಲಿಯಲ್ಲಿ ರಾಜೀವ್ ಕುಮಾರ್ ನೇತೃತ್ವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಲಾಯಿತು.

ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ದೇಶದಲ್ಲಿ 97 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇದರಲ್ಲಿ 49.72 ಕೋಟಿ ಪುರುಷರಿದ್ದಾರೆ. 47.15 ಕೋಟಿ ಮಹಿಳೆಯರು. 1.90 ಕೋಟಿ 80 ವರ್ಷ ದಾಟಿದ ಮತದಾರರಿದ್ದಾರೆ. 2.18 ಲಕ್ಷ ಮಂದಿ ಶತಾಯುಷಿ ಮತದಾರರಿದ್ದಾರೆ. 88.4 ಲಕ್ಷ ವಿಶೇಷ ಚೇತನ ಮತದಾರರಿದ್ದಾರೆ. ತೃತೀಯ ಲಿಂಗಿ ಮಯದಾರರ ಸಂಖ್ಯೆ 48 ಸಾವಿರ. 1.8 ಕೋಟಿ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ದೇಶದಲ್ಲಿ 10 ಲಕ್ಷದ 500 ಸಾವಿರ ಮತಗಟ್ಟೆಗಳಿವೆ. 55 ಲಕ್ಷ ಇವಿಎಂ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜೂನ್ 16ಕ್ಕೆ ಲೋಕಸಭೆಯ ಅವಧಿ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ ಅವರು, ಆ ಹೊತ್ತಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದರು. ಇಂತಹ ಸರ್ಕಾರವನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗ ಸನ್ನದ್ಧವಾಗಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 3