pashupathi
ಸ್ಥಳೀಯ

ಮುಖ್ಯ ನ್ಯಾಯಧೀಶರಿಗೆ ಶೂ ಎಸೆದ ಪ್ರಕರಣ ಖಂಡನೀಯ: ಕೃಷ್ಣಪ್ಪ ಸುಣ್ಣಾಜೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ. ಆರ್. ಗವಾಯಿ ಮೇಲೆ ವಕೀಲ ರಾಜೇಶ್ ಕಿಶೋರ್ ಎಂಬಾತ ತಾನು ಧರಿಸಿದ ಶೂ ಎಸೆದು ಅವಮಾನ ಮಾಡಿರುವುದು  ಖಂಡನೀಯ ಎಂದು ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಘ ಸಮಿತಿ ಸಂಚಾಲಕ ಕೃಷ್ಣಪ್ಪ ಸುಣ್ಣಾಜೆ ತಿಳಿಸಿದ್ದಾರೆ.

akshaya college

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟು ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸನಾತನ ಧರ್ಮಕ್ಕೆ ಅಪಮಾನವನ್ನು ಸಹಿಸುವುದಿಲ್ಲ ಎಂದು ಹೇಳುತ್ತಾ ವಕೀಲ ರಾಕೇಶ್ ಕಿಶೋರ್ ಎಂಬಾತ ಶೂ ಎಸೆದಿರುವುದು ಮುಖ್ಯ ನ್ಯಾಯಮೂರ್ತಿಯ ಮೇಲೆ ನಡೆದ ದಾಳಿಯಲ್ಲ ಬದಲಿಗೆ ಕೃತ್ಯ ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗ ಕೆಲವು ಸನಾತನವಾದಿಗಳು ಇದನ್ನು ವಿರೋಧಿಸಿದ್ದರು. ದಲಿತರೊಬ್ಬರು ಮುಖ್ಯ ನ್ಯಾಯ ಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ ಮನೋಸ್ಥಿತಿಗಳು ಇಂದಿಗೂ ಇರುವುದಕ್ಕೆ ಘಟನೆ ಸಾಕ್ಷಿಯಾಗಿದೆ. ವಿವಿಧ ಪ್ರಕರಣಗಳಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಆದೇಶಿಸುತ್ತಿಲ್ಲ ಮತ್ತು ಗವಾಯಿಯವರು ದಲಿತ ಸಮುದಾಯಕ್ಕೆ ಸೇರಿದವರೆಂಬ ದ್ವೇಷ ಭಾವನೆಯಿಂದ ಈ ಕೃತ್ಯ ಎಸಗಿದ ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರೊ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಘ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪಿ. ಕೆ. ರಾಜು ಬೆಳ್ತಂಗಡಿ,  ಬೆಳ್ತಂಗಡಿ ತಾಲೂಕು ಸಂಚಾಲಕ ಪದ್ಮನಾಭ ಗರ್ಗಾಡಿ, ಪುತ್ತೂರು ತಾಲೂಕು ಮಾಜಿ ಸಂಚಾಲಕ ಗಣೇಶ್ ಕರೆಕ್ಕಾಡು, ಕಡಬ ವಲಯ ಸಂಚಾಲಕ ಕಮಲಾಕ್ಷ ಕಡಬ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 116