Gl
ಸ್ಥಳೀಯ

WPL: ಗೆಲುವು ಗಿಟ್ಟಿಸಿಕೊಂಡ ಆರ್ ಸಿಬಿ ವನಿತೆಯರು | ಈ ಸಲ ಕಪ್ ನಮ್ದೇ ಎಂದು ಬೀಗಿದ ಅಭಿಮಾನಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ರವಿವಾರ ನಡೆದ ವನಿತಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ವಿರುದ್ಧ ಅಧಿಕಾರಯುತ ಜಯ ಸಾಧಿಸಿ ಮೊದಲ ಬಾರಿ ಕಪ್ ಗೆದ್ದು ಐಪಿಎಲ್ ಆರಂಭಕ್ಕೂ ಮುನ್ನ ಆರ್ ಸಿಬಿ ತಂಡಕ್ಕೆ ಹೊಸ ಉತ್ಸಾಹದ ಮಾರ್ಗ ತೋರಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಬಿಗಿ ದಾಳಿ ನಡೆಸಿದ ಆರ್ ಸಿಬಿ ವನಿತೆಯರು ಘಾತಕವಾಗಿ ಕಾಡಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 113 ರನ್ ಗಳಿಗೆ ಆಲೌಟ್ ಮಾಡಿದರು.

rachana_rai
Pashupathi
akshaya college

ಗುರಿ ಬೆನ್ನಟ್ಟಿದ ಸ್ಮೃತಿ ಮಂಧಾನ ಬಳಗ 19.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ(115) ತಲುಪಿ ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಸ್ಮೃತಿ ಮಂಧಾನ 31 ರನ್ , ಸೋಫಿ ಡಿವೈನ್ 32 ರನ್ ಗಳಿಸಿ ಔಟಾದರು. ಆ ಬಳಿಕ ಎಲ್ಲಿಸ್ ಪೆರ್ರಿ (35*) ರಿಚಾ ಘೋಷ್ (17*) ಗೆಲುವಿನತ್ತ ಕೊಂಡೊಯ್ದರು.

pashupathi

ಉತ್ತಮ ಆರಂಭ ಬಳಿಕ ಏಕಾಏಕಿ ಕುಸಿತ
ಡೆಲ್ಲಿಯ ಆರಂಭಿಕ ಜೋಡಿ ಮೊದಲ 7 ಓವರ್ ಗಳಲ್ಲಿ 64 ಉತ್ತಮ ಜತೆಯಾಟವಾಡಿದರಾದರೂ ತಂಡ ಕುಸಿದು ಹೋಯಿತು. ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್ 23, ಶಫಾಲಿ ವರ್ಮ 44 ರನ್ ಗಳಿಸಿದರು. ರಾಧಾ ಯಾದವ್ 12 ಮತ್ತು ಅರುಂಧತಿ ರೆಡ್ಡಿ 10 ರನ್ ಹೊರತು ಪಡಿಸಿ ಉಳಿದ ಆಟಗಾರ್ತಿಯರೆಲ್ಲ ಪೆವಿಲಿಯನ್ ಪರೇಡ್ ನಡೆಸಿದರು.

ಬಿಗಿ ದಾಳಿ ನಡೆಸಿದ ಶ್ರೇಯಾಂಕಾ ಪಾಟೀಲ್ 4, ಸೋಫಿ ಮೊಲಿನೆಕ್ಸ್ 3, ಆಶಾ ಶೋಭನ 2 ವಿಕೆಟ್ ಕಬಳಿಸಿದರು.

ಲೀಗ್‌ ಹಂತದಲ್ಲಿ ಆಡಿದ 8 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಮೆಗ್‌ ಲ್ಯಾನಿಂಗ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಎರಡನೇ ಬಾರಿಗೆ ನೇರವಾಗಿ ಫೈನಲ್‌ಗೇರಿದ ಸಾಧನೆ ಮಾಡಿತ್ತು. ಶುಕ್ರವಾರದ ಎಲಿಮಿನೇಟರ್‌ನಲ್ಲಿ ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ಎದುರು ರೋಚಕ 5 ರನ್‌ಗಳ ಗೆಲುವನ್ನಾಚರಿಸಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬಾರಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100