ದೇಶಸ್ಥಳೀಯ

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು!!

ಈ ಸುದ್ದಿಯನ್ನು ಶೇರ್ ಮಾಡಿ

ಜೈಪುರ: ರಾಜಸ್ಥಾನದ ಅಜ್ಮೇರ್‌ ಜಿಲ್ಲೆಯಲ್ಲಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್‌ ರೈಲು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮದರ್‌ ರೈಲು ನಿಲ್ದಾಣದ ಬಳಿ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ತಡರಾತ್ರಿ ಸುಮಾರು 3 ಗಂಟೆ ಸುಮಾರಿಗೆ ಹಳಿಗಳಿಂದ ರೈಲಿನ ಬೋಗಿಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

SRK Ladders

ರೈಲ್ವೆ ಇಲಾಖೆಯು ಸಹಾಯವಾಣಿಯನ್ನು ಬಿಡುಗಡೆ ಮಾಡಿದೆ. ರೈಲು ಹಳಿ ತಪ್ಪುತ್ತಲೇ ಜನ ನಿದ್ದೆಗಣ್ಣಿನಲ್ಲಿ ಇದ್ದರೂ ಕೆಳಗಡೆ ಇಳಿದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ರೈಲು ಹಳಿ ತಪ್ಪಲು ನಿಖರ ಕಾರಣ ತಿಳಿದುಬಂದಿಲ್ಲ. ಕೆಲವರಿಗೆ ಮಾತ್ರ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ರೈಲು ಹಳಿ ತಪ್ಪಿ, ಬೋಗಿಗಳು ಹಳಿಗಳಿಂದ ಕೆಳಗೆ ಇಳಿದ ಕಾರಣ ಬೇರೆ ರೈಲು ಸಂಚಾರಕ್ಕೆ ಅಡಚಣೆಯಾಯಿತು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 3